ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯ ಶೇ.50 ಹಾಸಿಗೆ ಮೀಸಲಿಗೆ ಡಾ.ಯೋಗಣ್ಣ ಆಕ್ಷೇಪ
ಮೈಸೂರು

ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯ ಶೇ.50 ಹಾಸಿಗೆ ಮೀಸಲಿಗೆ ಡಾ.ಯೋಗಣ್ಣ ಆಕ್ಷೇಪ

June 25, 2020

ಮೈಸೂರು, ಜೂ.24-ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡಬೇಕೆಂದು ಸರ್ಕಾರ ಹೊರಡಿಸಿರುವ ಆದೇಶ ದಿಂದ ಖಾಸಗಿ ಆಸ್ಪತ್ರೆಗಳು ಮುಚ್ಚುವ ಪರಿಸ್ಥಿತಿ ಉಂಟಾಗುತ್ತದೆ ಎಂದು ಮೈಸೂರಿನ ಸುಯೋಗ್ ಆಸ್ಪತ್ರೆ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.

ಒಂದೇ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿ ತರು ಮತ್ತು ಇನ್ನಿತರ ರೋಗಿಗಳನ್ನು ಮಿಶ್ರಣ ಮಾಡುವುದ ರಿಂದ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆ ಕೊರೊನಾ ಸೋಂಕಿತರಿಗೆ ಮೀಸಲಿಡುವ ಬದಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನೂ ಕೋವಿಡ್ ಆಸ್ಪತ್ರೆಗಳಾಗಿ ಬದಲಾಯಿಸುವುದು. ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಬಾಡಿಗೆಗೆ ಪಡೆದು ಅದನ್ನು ಕೋವಿಡ್ ಆಸ್ಪತ್ರೆಗಳನ್ನಾಗಿ ನಿರ್ವಹಿಸುವುದು ಸಮಂಜಸ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »