15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಸ್ವೀಕಾರ
News

15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಸ್ವೀಕಾರ

July 26, 2022

ನವದೆಹಲಿ: ದೇಶದ 15ನೇ ರಾಷ್ಟ್ರಪತಿಯಾಗಿ ಒಡಿಶಾ ಮೂಲದ ದ್ರೌಪದಿ ಮುರ್ಮು ಅವರು ಸಂಸತ್ತಿನ ಸೆಂಟ್ರಲ್ ಹಾಲ್‍ನಲ್ಲಿ ನಡೆದ ಸರಳ ಸಾಂಪ್ರ ದಾಯಿಕ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ನೂತನ ರಾಷ್ಟ್ರಪತಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. 2007ರಲ್ಲಿ ರಾಷ್ಟ್ರಪತಿಯಾಗಿದ್ದ ಪ್ರತಿಭಾ ಪಾಟೀಲ್ ನಂತರ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಏರಿದ ಎರಡನೇ ಮಹಿಳೆ ಹಾಗೂ ಮೊದಲ ಬುಡಕಟ್ಟು ಜನಾಂಗದ ಮಹಿಳೆ ದ್ರೌಪದಿ ಮುರ್ಮು ಆಗಿದ್ದಾರೆ. ದೇಶದ ಉನ್ನತ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ವಯಸ್ಸಿನವರು ಎನಿಸಿಕೊಂಡಿದ್ದಾರೆ. ಅಂದರೆ ಸ್ವಾತಂತ್ರ್ಯ ನಂತರ ಜನಿಸಿ, ದೇಶದ ಅತ್ಯುನ್ನತ ಸ್ಥಾನ ಅಲಂಕರಿಸಿದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಉಪ ರಾಷ್ಟ್ರಪತಿ ರಾಜ್ಯಸಭೆಯ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಮಂತ್ರಿಮಂಡಲದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳು, ಸಂಸತ್ತಿನ ಸದಸ್ಯರು ಮತ್ತು ಭಾರತ ಸರ್ಕಾರದ ಪ್ರಧಾನ ಸಿವಿಲ್ ಮತ್ತು ಮಿಲಿಟರಿ ಅಧಿಕಾರಿಗಳು ಇಂದು ಸಮಾರಂಭದಲ್ಲಿ ಭಾಗವಹಿಸಿದ್ದರು.

Translate »