ಉಚಿತ ವೈದ್ಯಕೀಯ ತಪಾಸಣೆಗೆ ಚಾಲನೆ
ಕೊಡಗು

ಉಚಿತ ವೈದ್ಯಕೀಯ ತಪಾಸಣೆಗೆ ಚಾಲನೆ

November 21, 2018

ಸೋಮವಾರಪೇಟೆ:  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ವತಿಯಿಂದ 2018-19ನೇ ಸಾಲಿನ ಒಂದರಿಂದ ಹತ್ತನೆ ತರಗತಿವರೆಗಿನ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಹಾಗೂ ಮೌಲ್ಯಾಂಕನ ಶಿಬಿರ ಮಂಗಳವಾರ ಚನ್ನ ಬಸಪ್ಪ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಗಿಡಕ್ಕೆ ನೀರೆರಯುವುದರ ಮೂಲಕ ಚಾಲನೆ ನೀಡಿದ ಬಿಇಒ ನಾಗರಾಜಯ್ಯ ಮಾತನಾಡಿ, ವಿಶೇಷ ಚೇತನ ಮಕ್ಕಳನ್ನು ನಮ್ಮವರಂತೆ ಕಾಣಬೇಕು. ಅವರಲ್ಲೂ ವಿಶೇಷ ಪ್ರತಿಭೆ ಇರುತ್ತದೆ. ಇಂತಹ ಮಕ್ಕಳು ಯಾವುದೇ ಸೌಲಭ್ಯಗಳಿಂದ ವಂಚಿತರಾಗದಂತೆ ಪೋಷಕರು ಮತ್ತು ಶಿಕ್ಷಕರು ಎಚ್ಚರಿಕೆ ವಹಿಸಬೇಕೆಂದರು. ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞ ಡಾ.ಜಸ್ವಂತ್, ತಾಲ್ಲೂಕು ಆರೋಗ್ಯಾಧಿಕಾರಿ ರವಿಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್, ಪದವೀಧರ ಮುಖ್ಯ ಶಿಕ್ಷಕಿ ಅಣ್ಣಮ್ಮ, ಬಿಆರ್‍ಪಿ ಶಶಿಧರ್ ಮತ್ತು ಸಿಆರ್‍ಪಿಗಳು ಉಪಸ್ಥಿತರಿದ್ದರು.

Translate »