ರಾತ್ರಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ
ಮೈಸೂರು

ರಾತ್ರಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

October 6, 2021

ಮೈಸೂರು, ಅ.5(ಎಂಕೆ)- ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ‘ರಾತ್ರಿ ಸ್ವಚ್ಛತಾ ಅಭಿಯಾನ’ಕ್ಕೆ ಮೇಯರ್ ಸುನಂದಾ ಪಾಲನೇತ್ರ ಮಂಗಳವಾರ ಚಾಲನೆ ನೀಡಿದರು.

ನಗರದ ಕೋಟೆ ಆಂಜನೇಯ ದೇವಸ್ಥಾನದ ಎದುರು ಕಸ ವಿಲೇವಾರಿ ವಾಹನಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದಸರಾ ಹಿನ್ನೆಲೆಯಲ್ಲಿ ಪ್ರತಿನಿತ್ಯ ಲಕ್ಷಾಂತರ ಮಂದಿ ಪ್ರವಾಸಿಗರು, ಸ್ಥಳಿಯ ನಿವಾಸಿಗಳು ಅರಮನೆ ಸೇರಿದಂತೆ ನಗರದ ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿನ ದೀಪಾಲಂಕಾರ ವೀಕ್ಷಣೆಗೆ ಬರುತ್ತಿದ್ದಾರೆ. ದಸರಾ ಉತ್ಸವ ಮುಗಿಯುವವರೆಗೆ ರಸ್ತೆಗಳು, ವೃತ್ತಗಳಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 80 ಮಂದಿ ಸ್ವಚ್ಛತಾ ಕಾರ್ಮಿಕರನ್ನು ನಿಯೋಜಿಸ ಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಪಾಲಿಕೆಯ ಪೌರಕಾರ್ಮಿ ಕರ ಹಾಗೂ ಇತರೆ ಕಾರ್ಮಿಕರಿಂದ ಸ್ವಚ್ಛತಾ ಕಾರ್ಯ ನಡೆಯು ವಂತೆ ರಾತ್ರಿ ವೇಳೆಯೂ ಸ್ವಚ್ಛತಾ ಕಾರ್ಯ ನಡೆಯುತ್ತದೆ ಎಂದು ತಿಳಿಸಿದರು. ಶಾಸಕ ಎಲ್.ನಾಗೇಂದ್ರ, ಮಾಜಿ ಮೇಯರ್ ಅಯೂಬ್ ಖಾನ್, ಪಾಲಿಕೆ ಸದಸ್ಯ ಆರೀಫ್ ಹುಸೇನ್, ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ, ಉಪ ಆಯುಕ್ತ ಮಹೇಶ್, ಆರೋಗ್ಯಾಧಿಕಾರಿಗಳಾದ ಡಾ.ನಾಗರಾಜ್, ಡಾ.ಹರ್ಷ ಇನ್ನಿತರರು ಉಪಸ್ಥಿತರಿದ್ದರು.

Translate »