ಡೆಂಗ್ಯೂ ವಿರೋಧಿ ಜಾಗೃತಿ ಜಾಥಾಕ್ಕೆ ಚಾಲನೆ

ಹಾಸನ: ನಗರದ ರಾಜೀವ್ ನರ್ಸಿಂಗ್ ಕಾಲೇಜಿ ನಿಂದ ಏರ್ಪಡಿಸಲಾಗಿದ್ದ ಡೆಂಗ್ಯೂ ವಿರೋಧಿ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ವಿಜಯ್‍ಪ್ರಕಾಶ್ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಡೆಂಗ್ಯೂ ಬಹಳ ಅಪಾಯ ಕಾರಿಯಾಗಿದ್ದು, ಈ ರೋಗದ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ಚಿಕಿತ್ಸೆಯನ್ನು ಪಡೆಯುವ ಮೊದಲು ವೈದ್ಯರನ್ನು ಭೇಟಿ ಯಾಗಬೇಕು. ವೈದ್ಯರು ನೀಡುವ ಸಲಹೆ ಮೇರೆಗೆ ಔಷಧೋಪ ಚಾರ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣಗಳು ಕಡಿಮೆಯಿದ್ದು, ವೈದ್ಯರು ಈ ಬಗ್ಗೆ ವಿಶೇಷ ನಿಗಾ ವಹಿಸಿದ್ದಾರೆ. ಅಲ್ಲದೇ ಈ ಕಾಯಿಲೆಯ ಕುರಿತಾಗಿ ಸಾರ್ವಜನಿಕರÀಲ್ಲಿ ಜಾಗೃತಿ ಮೂಡಿಸಲು ಅರಿವು ಕಾರ್ಯಕ್ರಮಗಳು ನಡೆಯಬೇಕಿವೆ ಎಂದು ತಿಳಿಸಿದರು. ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ಸತೀಶ್‍ಕುಮಾರ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ರಾಜಗೋಪಾಲ್, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅರಿವು ಮೂಡಿಸಿತು.