ಬೆಂಗಳೂರು, ಅ.11- ನಾಡಹಬ್ಬ ಮೈಸೂರು ದಸರಾ ಮಹೋತ್ಸವ ವೇಳೆ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಜತೆ ಭಾನುವಾರ ಬೆಳಗ್ಗೆ ಬೆಂಗ ಳೂರಿನಲ್ಲಿ ಚರ್ಚಿಸಿದರು.
ಅ.17ರಂದು ಆರಂಭಗೊಂಡು 10 ದಿನ ಗಳ ಕಾಲ ನಡೆಯುವ ದಸರಾ ಮಹೋ ತ್ಸವ ವೇಳೆ ಕೋವಿಡ್-19 ಸೋಂಕು ಹರಡ ದಂತೆ ಗರಿಷ್ಠ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳ ಬೇಕು. ಮೈಸೂರು ನಗರ ಮತ್ತು ಜಿಲ್ಲೆ ಯಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮುಖ್ಯ ಮಂತ್ರಿಗಳು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ನಿರ್ದೇಶನ ನೀಡಿದರು.
ಕೊರೊನಾ ಹರಡುವಿಕೆ ತಡೆಯಲು ಸದ್ಯ ಮೈಸೂರು ಜಿಲ್ಲಾಡಳಿತವು ತೆಗೆದು ಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಮುಖ್ಯ ಮಂತ್ರಿಗಳಿಗೆ ಜಿಲ್ಲಾಧಿಕಾರಿ ವಿವರಣೆ ನೀಡಿ ದರು. ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆ ಯನ್ನು ವೇಗಗೊಳಿಸಿರುವುದು, ಕೆಆರ್ ಆಸ್ಪತ್ರೆ ಯಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಿರುವುದು ಹಾಗೂ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಮೀಸಲಾಗಿರುವ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ವ್ಯವಸ್ಥೆ ಇರುವ ಹಾಸಿಗೆಗಳ ಸಂಖ್ಯೆ ಹೆಚ್ಚಿಸಿರುವುದು ಮೊದಲಾದ ಕ್ರಮಗಳನ್ನು ತ್ವರಿತಗತಿಯಲ್ಲಿ ಜಿಲ್ಲಾಡಳಿತ ಕೈಗೊಂಡಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆರೋಗ್ಯ ಇಲಾಖೆ ಆಯುಕ್ತ ಪಂಕಜಕುಮಾರ್ ಪಾಂಡೆ, ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‍ಕುಮಾರ್ ಉಪಸ್ಥಿತರಿದ್ದರು.