ದುಬಾರೆ ಸಾಕಾನೆ ಶಿಬಿರದ ಹೆಣ್ಣಾನೆ ಸಾವು
ಕೊಡಗು

ದುಬಾರೆ ಸಾಕಾನೆ ಶಿಬಿರದ ಹೆಣ್ಣಾನೆ ಸಾವು

July 11, 2018

ಕುಶಾಲನಗರ: ಸಮೀಪದ ನಂಜರಾಯಪಟ್ಟಣ ಬಳಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ದುಬಾರೆ ಸಾಕಾನೆ ಶಿಬಿರದಲ್ಲಿನ ಹೆಣ್ಣಾನೆ ಮೈಥಿಲಿ ಮಂಗಳವಾರ ಮೃತಪಟ್ಟಿದೆ.

ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ್ದ 52 ವರ್ಷದ ಮೈಥಿಲಿ ಆನೆ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಸೋಮವಾರ ಮೈಥಿಲಿಯ ಆರೋಗ್ಯ ಸ್ಥಿತಿ ತುಂಬಾ ಹದಗೆಟ್ಟಿತು. ಹುಣಸೂರು ವನ್ಯಜೀವಿ ವಿಭಾಗದ ವೈದ್ಯಾಧಿಕಾರಿ ಡಾ.ಮುಜೀಬ್ ಚಿಕಿತ್ಸೆ ನೀಡಿದ್ದರು. ಮಂಗಳವಾರ ಬೆಳಿಗ್ಗೆ ಮೈಥಿಲಿ ಹೃದಯಾಘಾತದಿಂದ ಮೃತಪಟ್ಟಿತು. ವೈದ್ಯಾಧಿಕಾರಿ ಡಾ.ಮುಜೀಬ್ ಮರಣೋತ್ತರ ಪರೀಕ್ಷೆ ಬಳಿಕ ದುಬಾರೆ ಅರಣ್ಯ ಪ್ರದೇಶದಲ್ಲಿ ಇಲಾಖಾ ಸಿಬ್ಬಂದಿಗಳು ಹಾಗೂ ಮಾವುತ,ಕಾವಾಡಿಗಳು ಮೃತ ಮೈಥಿಲಿಗೆ ಪೂಜೆ ಸಲ್ಲಿಸಿ ಅಂತಿಮ ಸಂಸ್ಕಾರ ನೆರವೇರಿಸಿದರು.
ಈ ಸಂದರ್ಭ ಕುಶಾಲನಗರ ವಲಯ ಅರಣ್ಯಾಧಿಕಾರಿ ಅರುಣ್, ದುಬಾರೆ ಉಪ ವಲಯ ಅರಣ್ಯಾಧಿಕಾರಿ ರಂಜನ್, ದೇವಿ ಪ್ರಸಾದ್ ಹಾಗೂ ಸಿಬ್ಬಂದಿಗಳು ಇದ್ದರು.

Translate »