ಯುಪಿಎ ಅವಧಿಯಲ್ಲಿ 72 ಸಾವಿರ  ಕೋಟಿ ರೈತರ ಸಾಲ ಮನ್ನಾ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ
ಚಾಮರಾಜನಗರ

ಯುಪಿಎ ಅವಧಿಯಲ್ಲಿ 72 ಸಾವಿರ ಕೋಟಿ ರೈತರ ಸಾಲ ಮನ್ನಾ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ

April 9, 2019

ಚಾಮರಾಜನಗರ: ಕೇಂದ್ರದ ಯುಪಿಎ ಸರ್ಕಾರದಲ್ಲ್ಲಿ ಪ್ರಧಾನಮಂತ್ರಿ ಯಾಗಿದ್ದ ಮನಮೋಹನ್‍ಸಿಂಗ್ ಅವರು ರೈತರ 72 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ಬಂಡಿಗೆರೆ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತ ನಾಡಿದ ಅವರು, ರಾಜ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರ ಆಡಳಿತಾವಧಿಯಲ್ಲಿ ಸಹಕಾರ ಸಂಘದಲ್ಲಿ ರೈತರು ಪಡೆದಿದ್ದ 50 ಸಾವಿರ ರೂ. ಸಾಲ ಮನ್ನಾ ಮಾಡಿದರು. ಅಲ್ಲದೇ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡುವ ಬಡವರ, ರೈತರ ಪರ ಎಂದು ಸಾಬೀತು ಪಡಿಸಿದ್ದಾರೆ ಎಂದರು.

ಪ್ರಧಾನಿ ನರೇಂದ್ರಮೋದಿ ರೈತರ ಸಾಲ ಮನ್ನಾ ಮಾಡುವಲ್ಲಿ ವಿಫಲರಾಗಿದ್ದಾರೆ. ಮೋದಿ ತಮ್ಮ 5 ವರ್ಷದ ಆಡಳಿತಾವಧಿ ಯಲ್ಲಿ ಸುಳ್ಳು ಹೇಳುವುದನ್ನೇ ಬಂಡವಾಳ ಮಾಡಿಕೊಂಡು ಜನತೆಯ ದಿಕ್ಕು ತಪ್ಪಿ ಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ದಿನನಿತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ತೈಲ ಬೆಲೆ ಹೆಚ್ಚಳ ವಾಗಿದೆ. ಚುನಾವಣಾ ಪೂರ್ವದಲ್ಲಿ ವಿದೇಶ ದಲ್ಲಿರುವ ಕಪ್ಪು ಹಣವನ್ನು ತಂದು ಎಲ್ಲರ ಖಾತೆಗೂ 15 ಲಕ್ಷ ರೂ. ಹಾಕುವುದಾಗಿ ಭರವಸೆ ನೀಡಿದ್ದರು. ಆದರೂ 15 ಪೈಸೆಯನ್ನು ಹಾಕಿಲ್ಲ ಎಂದರು.

ಪಕ್ಷದ ಅಭ್ಯರ್ಥಿ ಆರ್.ಧ್ರುವನಾರಾಯಣ್ 2 ಬಾರಿ ಶಾಸಕರಾಗಿ, 2 ಬಾರಿ ಸಂಸದ ರಾಗಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರು, ಮುಖಂಡರು ಕಾಂಗ್ರೆಸ್ ಸಾಧನೆ, ಕಾರ್ಯ ಕ್ರಮ, ಕೊಡುಗೆಗಳನ್ನು ಹಾಗೂ ನರೇಂದ್ರ ಮೋದಿಯವರ ಸುಳ್ಳಿನ ಭರವಸೆಗಳನ್ನು ಮತ ದಾರರಿಗೆ ತಿಳಿಸಿಕೊಡುವ ಮೂಲಕ ಆರ್.ಧ್ರುವ ನಾರಾಯಣ್‍ರನ್ನು ಅತ್ಯಧಿಕ ಮತದಿಂದ ಗೆಲ್ಲಿಸಿಕೊಡುವಂತೆ ಮನವಿ ಮಾಡಿದರು.

ಮತ್ತೊಮ್ಮೆ ಅವಕಾಶ ಕೊಡಿ: ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ್ ಮಾತನಾಡಿ, ಕಾಂಗ್ರೆಸ್ ಉಪ್ಪಾರ ಸಮುದಾಯಕ್ಕೆ ರಾಜ ಕೀಯ ಸ್ಥಾನಮಾನ ಕೊಟ್ಟು ಪುಟ್ಟರಂಗಶೆಟ್ಟಿ ಅವರನ್ನು 3 ಶಾಸಕರಾಗಿ ಮಾಡಿ, ಪ್ರಸ್ತುತ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದು, ಈ ಚುನಾವಣೆಯ ನೇತೃತ್ವ ವಹಿಸಿದೆ. ಆದ್ದರಿಂದ ಪುಟ್ಟರಂಗಶೆಟ್ಟರ ಕೈ ಬಲಪಡಿಸಲು ಈ ಚುನಾವಣೆಯಲ್ಲಿ ಹರದನಹಳ್ಳಿ ಭಾಗದ ಜನತೆ ಕಾಂಗ್ರೆಸ್ ಅಭ್ಯರ್ಥಿಯಾದ ನನಗೆ ಹೆಚ್ಚಿನ ಮತಗಳನ್ನು ಹಾಕುವ ಮೂಲಕ ಮತ್ತೊಮ್ಮೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.

ಈ ವೇಳೆ ಮಾಜಿ ಶಾಸಕ ಎ.ಆರ್.ಕೃಷ್ಣ ಮೂರ್ತಿ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಆರ್.ಮಹ ದೇವು, ಬ್ಲಾಕ್ ಅಧ್ಯಕ್ಷ ಗುರುಸ್ವಾಮಿ, ಮಹಮದ್ ಅಸ್ಗರ್, ಜಿಪಂ ಸದಸ್ಯರಾದ ಶಶಿಕಲಾ, ಕೆ.ಪಿ.ಸದಾಶಿವಮೂರ್ತಿ, ನಗರ ಸಭಾ ಮಾಜಿ ಅಧ್ಯಕ್ಷ ಎಸ್.ನಂಜುಂಡ ಸ್ವಾಮಿ, ಜಿಪಂ ಮಾಜಿ ಅಧ್ಯಕ್ಷ ಸಿ.ಎ.ಮಹ ದೇವಶೆಟ್ಟಿ, ಚೂಡಾ ಮಾಜಿ ಅಧ್ಯಕ್ಷ ಸೈಯದ್ ರಫೀ, ಜಿಪಂ ಮಾಜಿ ಸದಸ್ಯ ರಾದ ಎಸ್.ಸೋಮನಾಯಕ, ಕಾವೇರಿ ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಲತಾ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ.ರವಿ ಕುಮಾರ್, ಚಂದ್ರು, ತಾಪಂ ಸದಸ್ಯರಾದ ಮಹದೇವಶೆಟ್ಟಿ, ಪುಟ್ಟಸ್ವಾಮಿ, ಮುಖಂಡ ರಾದ ಚೆಂಗುಮಣಿ, ನಂಜುಂಡಸ್ವಾಮಿ, ಎಂ. ಶಿವಮೂರ್ತಿ, ಬೂದಿತಿಟ್ಟು ಲಿಂಗರಾಜು, ನಾಗಬಸವಣ್ಣ ಇತರರಿದ್ದರು.

Translate »