ವಾರದಲ್ಲಿ ದಸರಾ ಲೆಕ್ಕ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು

ವಾರದಲ್ಲಿ ದಸರಾ ಲೆಕ್ಕ: ಸಚಿವ ಎಸ್.ಟಿ.ಸೋಮಶೇಖರ್

October 17, 2021

ಮೈಸೂರು,ಅ.೧೬(ಆರ್‌ಕೆ)-ವಾರದೊಳ ಗಾಗಿ ೨೦೨೧ರ ದಸರಾ ಮಹೋತ್ಸವದ ಲೆಕ್ಕ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈ ಬಾರಿಯ ದಸರಾ ಮಹೋ ತ್ಸವಕ್ಕೆ ಮುಖ್ಯಮಂತ್ರಿಗಳು ೬ ಕೋಟಿ ರೂ. ಮಂಜೂರು ಮಾಡಿದ್ದರು. ಈಗಾಗಲೇ ಚಾಮರಾಜನಗರ, ಶ್ರೀರಂಗಪಟ್ಟಣ ದಸರಾಗೆ ತಲಾ ೫೦ ಲಕ್ಷ ಹಾಗೂ ಅರಕಲಗೂಡು ದಸರಾಗೆ ೨೦ ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಮೈಸೂರು ದಸರಾಗೆ ಮಾಡಿರುವ ವೆಚ್ಚದ ಬಗ್ಗೆ ವಾರದೊಳಗಾಗಿ ಲೆಕ್ಕ ಕೊಡುತ್ತೇನೆ ಎಂದರು.

೨೦೨೧-೨೨ನೇ ಸಾಲಿನಲ್ಲಿ ಸಹಕಾರಿ ಸಂಸ್ಥೆಗಳಿAದ ೩೦ ಲಕ್ಷ ರೈತರಿಗೆ ೨೦,೮೧೦ ಕೋಟಿ ರೂ. ಸಾಲ ನೀಡುವ ಗುರಿ ಹೊಂದಿದ್ದು, ಏಪ್ರಿಲ್ ೧ರಿಂದೀಚೆಗೆ ೧೨,೯೦,೦೦೦ ರೈತರಿಗೆ ೯,೨೦೦ ಕೋಟಿ ರೂ. ಸಾಲ ನೀಡಲಾಗಿದೆ. ನಾನೇ ಸ್ವತಃ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಅರ್ಹ ರೈತರಿಗೆ, ಸ್ವಯಂ ಸೇವಾ ಸ್ತಿçà ಶಕ್ತಿ ಸಂಘಗಳಿಗೆ ಸಾಲ ಸೌಲಭ್ಯ ನೀಡುವ ಪ್ರಕ್ರಿಯೆ ಯನ್ನು ಖುದ್ದು ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಸಂಬAಧ ಪ್ರಕ್ರಿಯೆ ತೀವ್ರಗೊಳಿಸಲಿದ್ದು, ಅಭಿವೃದ್ಧಿ ಪಡಿಸಿ ಹೆಚ್ಚು ಹೆಚ್ಚು ವಿಮಾನಗಳ ಹಾರಾಟ ವಾಗುವಂತೆ ಮಾಡಿ ಇಲ್ಲಿನ ಕೈಗಾರಿಕೋ ದ್ಯಮ, ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ. ದೇವೇಗೌಡ, ಮೇಯರ್ ಸುನಂದಾ ಪಾಲ ನೇತ್ರ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಜಂಗಲ್ ಲಾಡ್ಜ್ಸ್ ಅಂಡ್ ರೆಸಾರ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಅಪ್ಪಣ್ಣ, ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಪಂ ಸಿಇಓ ಯೋಗೀಶ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಎಸ್ಪಿ ಆರ್.ಚೇತನ್, ಡಿಸಿಪಿ ಪ್ರದೀಪ್ ಗುಂಟಿ ಸೇರಿದಂತೆ ಹಲ ವರು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Translate »