ರಾಜ್ಯಪಾಲರು, ಮುಖ್ಯಮಂತ್ರಿ, ಸಭಾಧ್ಯಕ್ಷರಿಗೆ ದಸರೆ ಆಹ್ವಾನ
ಮೈಸೂರು

ರಾಜ್ಯಪಾಲರು, ಮುಖ್ಯಮಂತ್ರಿ, ಸಭಾಧ್ಯಕ್ಷರಿಗೆ ದಸರೆ ಆಹ್ವಾನ

September 22, 2022

ಮೈಸೂರು,ಸೆ.21(ಆರ್‍ಕೆ)-ಸೆಪ್ಟೆಂಬರ್ 26ರಿಂದ ಆರಂಭ ವಾಗುವ ಮೈಸೂರು ದಸರಾ ಮಹೋತ್ಸವಕ್ಕೆ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾ ಪುರೆ ಸೇರಿದಂತೆ ಗಣ್ಯಾತಿ ಗಣ್ಯರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಬುಧವಾರ ಬೆಂಗಳೂರಿ ನಲ್ಲಿ ಆಹ್ವಾನಿಸಿದರು. ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‍ರೊಂದಿಗೆ ರಾಜಭವನಕ್ಕೆ ತೆರಳಿದ ಸಚಿವರು, ರಾಜ್ಯ ಪಾಲರನ್ನು ಭೇಟಿ ಮಾಡಿ 2022ರ ನಾಡಹಬ್ಬದಲ್ಲಿ ಪಾಲ್ಗೊ ಳ್ಳುವಂತೆ ಶಾಲು ಹೊದಿಸಿ, ಫಲ ತಾಂಬೂಲ ನೀಡಿ ಆಹ್ವಾನಿಸಿ ದರು. ನಂತರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ದಸರಾ ಉದ್ಘಾಟನೆ ಹಾಗೂ ವಿಜಯದಶಮಿ ಮೆರವಣಿಗೆ ಉದ್ಘಾಟನಾ ಕಾರ್ಯ ಕ್ರಮದಲ್ಲಿ ಪಾಲ್ಗೊಳ್ಳುವಂತೆ ಆತ್ಮೀಯವಾಗಿ ಆಹ್ವಾನಿಸಿದರು.

ಆಹ್ವಾನ ಪತ್ರಿಕೆ ಸ್ವೀಕರಿಸಿದ ಮುಖ್ಯಮಂತ್ರಿಗಳು, ನಾಡಹಬ್ಬ ದಲ್ಲಿ ರಾಷ್ಟ್ರಪತಿಗಳೊಂದಿಗೆ ಭಾಗವಹಿಸಲು ಸಂತೋಷವಾಗು ತ್ತಿದ್ದು, ಮಹೋತ್ಸವ ಯಶಸ್ವಿಯಾಗಲೆಂದು ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಶುಭ ಕೋರಿದರು. ಅದೇ ವೇಳೆ ವಿಧಾನಸೌಧದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾ ಪುರೆ ಅವರಿಗೂ ಆಹ್ವಾನ ನೀಡಿದ ಸಚಿವರು, ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯ ಮೂರ್ತಿ ಅಲೋಕ್ ಆರಾಧೆ ಅವರಿಗೂ ಫಲತಾಂಬೂಲ ನೀಡಿ ದಸರೆಗೆ ಆಹ್ವಾನ ನೀಡಿದರು. ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷೆ ಎಂ.ಜೆ.ರೂಪಾ, ಕಾರ್ಯದರ್ಶಿ ಕೆ.ಕುಬೇರಪ್ಪ, ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸಗೌಡ, ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ, ರೇವಣ್ಣ ಹಾಗೂ ಇತ ರರು ಈ ಸಂದರ್ಭ ಸಚಿವರೊಂದಿಗೆ ಉಪಸ್ಥಿತರಿದ್ದರು.

Translate »