ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸಿಪಿಐ ಆನಂದ್ ಮೇತ್ರೆ ಬಂಧನ
News

ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸಿಪಿಐ ಆನಂದ್ ಮೇತ್ರೆ ಬಂಧನ

May 6, 2022

ಕಲಬುರಗಿ, ಮೇ ೫- ಪಿಎಸ್‌ಐ ನೇಮ ಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ, ರಾಯಚೂರು ಜಿಲ್ಲೆಯ ಲಿಂಗಸೂಗೂರು ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ್ ಮೇತ್ರೆ ಅವರನ್ನು ಗುರುವಾರ ಬಂಧಿಸಿದೆ. ಪ್ರಕರಣಕ್ಕೆ ಸಂಬAಧಿಸಿ ದಂತೆ ಈ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ನಿನ್ನೆಯಿಂದ ಸುಮಾರು ೧೦ ಗಂಟೆಗಳ ಸುದೀರ್ಘ ವಿಚಾ ರಣೆ ನಡೆಸಿದ ಸಿಐಡಿ ತಂಡ, ಇಂದು ಇಬ್ಬರೂ ಅಧಿಕಾರಿಗಳನ್ನು ಬಂಧಿಸಿದೆ. ವೈದ್ಯಕೀಯ ತಪಾಸಣೆ ನಂತರ ಆರೋಪಿ ಅಧಿಕಾರಿಗಳನ್ನು ಸಿಐಡಿ ಪೊಲೀಸರು ೩ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿ ಸಿದ್ದು, ಮಲ್ಲಿಕಾರ್ಜುನ ಸಾಲಿ ಮತ್ತು ಆನಂದ್ ಮೇತ್ರೆ ಇಬ್ಬರನ್ನೂ ೮ ದಿನಗಳ ಕಾಲ ಪೊಲೀಸ್
ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ೩ನೇ ಜೆಎಂಎಫ್‌ಸಿ ನ್ಯಾಯಾಲಯದ ಸರ್ಕಾರಿ ವಕೀಲ ಶಿವಶರಣಪ್ಪ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ಸಿಐಡಿ ತಂಡ, ಡಿವೈಎಸ್‌ಪಿ ರ‍್ಯಾಂಕ್ ಅಧಿಕಾರಿಯನ್ನು ಬಂಧಿಸಿರುವುದು ಇದೇ ಮೊದಲು. ಈಗಾಗಲೇ ೭ ದಿನಗಳಿಂದ ಸಿಐಡಿ ಕಸ್ಟಡಿಯಲ್ಲಿರುವ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಸಾಲಿ ಅವರನ್ನು ಬಂಧಿಸಲಾಗಿದೆ. ಆರ್.ಡಿ.ಪಾಟೀಲ್ ಅವರು ಬ್ಲೂಟೂತ್ ಸಾಧನವನ್ನು ಬಳಸಿಕೊಂಡು ಅಭ್ಯರ್ಥಿಗಳಿಗೆ ಪಿಎಸ್‌ಐ ಪರೀಕ್ಷೆ ಬರೆಯಲು ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಸಾಲಿ ಮತ್ತು ಮೈತ್ರೆ ಬಂಧನದೊAದಿಗೆ ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಸಿಐಡಿಯಿಂದ ಬಂಧಿತರ ಸಂಖ್ಯೆ ೩೧ಕ್ಕೆ ಏರಿಕೆಯಾಗಿದೆ.

Translate »