ಸಾಮಾಜಿಕ ಜಾಲ ತಾಣಗಳ ಮೇಲೆ ಹದ್ದಿನ ಕಣ್ಣು
ಮೈಸೂರು

ಸಾಮಾಜಿಕ ಜಾಲ ತಾಣಗಳ ಮೇಲೆ ಹದ್ದಿನ ಕಣ್ಣು

March 11, 2019

ನವದೆಹಲಿ: ಚುನಾವಣಾ ಆಯೋಗವು ಸಾಮಾಜಿಕ ಜಾಲ ತಾಣಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಚುನಾವಣೆ ಸಂದರ್ಭದಲ್ಲಿ ಟ್ವೀಟರ್, ವಾಟ್ಸಪ್, ಫೇಸ್‍ಬುಕ್, ಇನ್‍ಸ್ಟ್ರಾ ಗ್ರಾಂ ಮುಂತಾದ ಸಾಮಾಜಿಕ ಜಾಲ ತಾಣಗಳಲ್ಲಿ ಅಭ್ಯರ್ಥಿ ಪರ ಪ್ರಚಾರ ಅಥವಾ ಶಾಂತಿ-ಸುವ್ಯವಸ್ಥೆ ಕದಡುವಂತಹ ಪೋಸ್ಟ್‍ಗಳನ್ನು ಹಾಕಿದರೆ, ಶಿಕ್ಷೆ ಕಟ್ಟಿಟ್ಟ ಬುತ್ತಿ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನೀಲ್ ಅರೋರಾ ಅವರು ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತ ನಾಡುತ್ತಾ, ಸಾಮಾಜಿಕ ಜಾಲ ತಾಣದಲ್ಲಿ ಪ್ರಚಾರ ಮಾಡಬೇಕಾದರೂ, ಅಭ್ಯರ್ಥಿ ಗಳು ಕಡ್ಡಾಯವಾಗಿ ಆಯೋಗದ ಅನು ಮತಿ ಪಡೆಯಬೇಕು ಎಂದು ಹೇಳಿದರು. ಅಭ್ಯರ್ಥಿಗಳು ಆಯೋಗಕ್ಕೆ ಪ್ರಮಾಣ ಪತ್ರ ಸಲ್ಲಿಸುವಾಗ ತಮ್ಮ ಸಾಮಾಜಿಕ ಜಾಲ ತಾಣದ ಖಾತೆಗಳ ಬಗ್ಗೆ ಕೂಡ ನಮೂದಿಸಿರಬೇಕು ಎಂದು ಅವರು ತಿಳಿಸಿದರು.

ಒಂದು ವೇಳೆ ಅನುಮತಿ ಇಲ್ಲದೇ ಯಾವುದಾದರೂ ಗ್ರೂಪ್‍ಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರೆ ಅಡ್ಮಿನ್‍ಗಳ ವಿರುದ್ಧ ಕೇಸ್ ಹಾಕಲಾಗುವುದು ಎಂದು ಅವರು ಕಟ್ಟುನಿಟ್ಟಾಗಿ ತಿಳಿಸಿದ್ದಾರೆ. ಈ ಹಿಂದಿನ ಚುನಾವಣೆಗಳಲ್ಲಿ ಸಾಮಾಜಿ ಜಾಲ ತಾಣಗಳ ಮೂಲಕ ಚುನಾವಣಾ ಪ್ರಚಾರ ಎಗ್ಗಿಲ್ಲದೇ ನಡೆಯುತ್ತಿತ್ತು. ಆದರೆ ಈ ಬಾರಿ ಚುನಾವಣಾ ಆಯೋಗವು ಸಾಮಾಜಿಕ ಜಾಲ ತಾಣಗಳ ಮೇಲೂ ಹದ್ದಿನ ಕಣ್ಣಿಟ್ಟಿದೆ.

Translate »