ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯ: ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು

ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯ: ವಿದ್ಯಾರ್ಥಿಗಳ ಪ್ರತಿಭಟನೆ

July 7, 2018

ಮೈಸೂರು:  ರಾಜ್ಯ ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯಿಸಲಾಗಿದೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಮೈಸೂರಿನ ವಿ.ವಿ.ಮೊಹಲ್ಲಾದಲ್ಲಿರುವ ಮಾತೃಮಂಡಳಿ ವೃತ್ತದ ಬಳಿ ಶುಕ್ರವಾರ ಸಂಜೆ ಜಮಾಯಿಸಿದ್ದ ವಿದ್ಯಾರ್ಥಿಗಳು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಜೆಟ್ ಬಗ್ಗೆ ಇದ್ದ ನಿರೀಕ್ಷೆಗಳು ಹುಸಿಯಾಗಿವೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ, ಸರ್ಕಾರಿ ಹಾಸ್ಟೆಲ್‍ಗಳ ಉನ್ನತೀಕರಣ ಸೇರಿದಂತೆ ಅವಶ್ಯಕವಾದ ಕಾರ್ಯಕ್ರಮಗಳ ಬಗ್ಗೆ ಬಜೆಟ್‍ನಲ್ಲಿ ಪ್ರಸ್ತಾಪಿಸಿಲ್ಲ. ಅಲ್ಲದೆ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಭರ್ತಿ ಬಗ್ಗೆಯೂ ಕ್ರಮ ಕೈಗೊಂಡಿಲ್ಲ. ಶಿಕ್ಷಣ ಕ್ಷೇತ್ರವನ್ನು ಕಡೆಗಾಣ ಸಿರುವ ಬಜೆಟ್ ಸತ್ವಹೀನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶ್ರೀರಾಮ್, ಶರತ್, ಹೇಮಂತ್ ಸೇರಿದಂತೆ ಎಬಿವಿಪಿ ಮುಖಂಡರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Translate »