ಈದ್ ಮಿಲಾದ್, ಟಿಪ್ಪು ಜಯಂತಿ ಹಿನ್ನೆಲೆ ಮೈಸೂರಲ್ಲಿ ನಿಷೇಧಾಜ್ಞೆ
ಮೈಸೂರು

ಈದ್ ಮಿಲಾದ್, ಟಿಪ್ಪು ಜಯಂತಿ ಹಿನ್ನೆಲೆ ಮೈಸೂರಲ್ಲಿ ನಿಷೇಧಾಜ್ಞೆ

November 9, 2019

ಮೈಸೂರು, ನ. 8- ಈದ್ ಮಿಲಾದ್ ಮತ್ತು ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ ನವೆಂಬರ್ 9ರಂದು ಮಧ್ಯರಾತ್ರಿ 12 ಗಂಟೆಯಿಂದ ನವೆಂಬರ್ 10ರಂದು ಮಧ್ಯರಾತ್ರಿ 12 ಗಂಟೆವರೆಗೆ ಕಲಂ 144 ಸಿಆರ್‍ಪಿಸಿ ಕಾಯ್ದೆಯಡಿ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆ ಕಾಪಾಡುವ ದೃಷ್ಟಿಯಿಂದ ಈದ್ ಮಿಲಾದ್ ಹಬ್ಬದ ಆಚರಣೆ, ಕಾರ್ತಿಕ ಮಾಸ ಹಾಗೂ ದೇವಸ್ಥಾನದ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಯಾವುದೇ ರೀತಿಯ ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಬಹಿರಂಗ ಸಭೆಗಳನ್ನು ನಡೆಸಬಾರದು. ವಾಹನಗಳ ಮೇಲೆ ಬ್ಯಾನರ್, ಬಂಟಿಂಗ್ಸ್, ಬಾವುಟಗಳು, ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಪ್ರಚೋದಾ ತ್ಮಕ ಘೋಷಣೆಗಳನ್ನು ಕೂಗಬಾರದು ಎಂದು ಅವರು ತಿಳಿಸಿದ್ದಾರೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದ ಸುತ್ತಲಿರುವ ಪಾರ್ಕಿಂಗ್ ಪ್ರದೇಶಗಳನ್ನೊಳಗೊಂ ಡಂತೆ ಒಳಭಾಗದ ಆಸನ ಹಾಗೂ ಮೈದಾನದಲ್ಲಿ ಮುಂಜಾಗ್ರತಾ ಕ್ರಮವಾಗಿ ನವೆಂಬರ್ 9ರ ಮಧ್ಯರಾತ್ರಿ 12 ಗಂಟೆಯಿಂದ ನವೆಂಬರ್ 10ರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಹೊರಡಿಸಿರುವು ದಾಗಿ ತಿಳಿಸಿರುವ ಅವರು, ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶ ವನ್ನು ಉಲ್ಲಂಘಿಸಿ, ಸಭೆ ಸಮಾರಂಭ, ಮೆರವಣಿಗೆ ನಡೆಸಲು ಪ್ರಯತ್ನಿಸಿದಲ್ಲಿ ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಅದೇ ರೀತಿ ಜಿಲ್ಲೆಯಾ ದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಆದೇಶ ಹೊರಡಿಸಿ ದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಎಸ್ಪಿ ರಿಷ್ಯಂತ್ ಅವರು, ಜಿಲ್ಲೆಯಾದ್ಯಂತ ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮದ್ಯ ಮಾರಾಟ ನಿಷೇಧಿಸಲಾಗಿದೆ. ಯಾವುದೇ ರೀತಿಯ ಮೆರವಣಿಗೆಗಳಿಗೆ ಅನುಮತಿ ಇಲ್ಲ. ವಾಟ್ಸಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಾಕಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Translate »