ಧ್ರುವ ಗೆಲ್ಲಿಸಿ ಮತ್ತಷ್ಟು ಅಭಿವೃದ್ಧಿಗೆ ನಾಂದಿ ಹಾಡಿ: ಮನವಿ
ಚಾಮರಾಜನಗರ

ಧ್ರುವ ಗೆಲ್ಲಿಸಿ ಮತ್ತಷ್ಟು ಅಭಿವೃದ್ಧಿಗೆ ನಾಂದಿ ಹಾಡಿ: ಮನವಿ

April 8, 2019

ಗುಂಡ್ಲುಪೇಟೆ: ಚಾ.ನಗರ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಸದ ಆರ್.ಧ್ರುವನಾರಾಯಣ್ ಅವರನ್ನು ಹೆಚ್ಚಿನ ಮತಗಳಿಂದ ಆಯ್ಕೆ ಮಾಡಿ ಮತ್ತಷ್ಟು ಅಭಿವೃದ್ಧಿಗೆ ನಾಂದಿ ಹಾಡಿ ಎಂದು ಕಾಂಗ್ರೆಸ್ ಮುಖಂಡ ಹೆಚ್.ಎಂ.ಗಣೇಶ್ ಪ್ರಸಾದ್ ಮತದಾರರಲ್ಲಿ ಮನವಿ ಮಾಡಿದರು.

ತಾಲೂಕಿನ ತೆರಕಣಾಂಬಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶ ಉದ್ದೇಶಿಸಿ ಮಾತ ನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳ ಮೂಲಕ ಬಡವ ರಿಗೆ ಅಗತ್ಯವಾದ ಕಾರ್ಯಕ್ರಮಗಳನ್ನು ನೀಡಿತ್ತು. ಕಳೆದ ಎರಡು ಬಾರಿಯೂ ಸಂಸದರಾಗಿದ್ದ ಆರ್.ಧ್ರುವನಾರಾಯಣ್ ಸಾಮಾನ್ಯ ಜನರ ಸಮಸ್ಯೆಗಳಿಗೂ ಸ್ಪಂದಿಸಿ ದ್ದಾರೆ. ಹೆಚ್ಚಿನ ಅನುದಾನ ತಂದು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅಲ್ಲದೆ ಉತ್ತಮ ಸಂಸದೀಯ ನಡವಳಿಕೆಯಿಂದ ಕ್ಷೇತ್ರದ ಮತದಾರರ ಗೌರವ ಹೆಚ್ಚಿಸಿದ್ದಾರೆ. ಆದ್ದರಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚಿನ ಮತ ನೀಡಿ ವಿಜೇತರನ್ನಾಗಿಸಬೇಕು ಎಂದರು.

ಸಂಸದ ಆರ್.ಧ್ರುವನಾರಾಯಣ್ ಮಾತ ನಾಡಿ, ಕ್ಷೇತ್ರದಲ್ಲಿ 10 ವರ್ಷದಿಂದ ನನ್ನ ಶಕ್ತಿ ಮೀರಿ ಶಿಕ್ಷಣ, ಆರೋಗ್ಯ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ಮಾಡಿದ್ದು, ಈ ಬಾರಿಯೂ ಕಾಂಗ್ರೆಸ್ ಬೆಂಬಲಿಸುವು ದರೊಂದಿಗೆ ನನ್ನನ್ನು ಹೆಚ್ಚಿನ ಮತಗಳಿಂದ ಜಯಶಾಲಿಯಾಗುವಂತೆ ಮಾಡಿ ಎಂದು ಮನವಿ ಮಾಡಿದರು.

ಈ ವೇಳೆ ಮಾಜಿ ಸಂಸದ ಎ.ಸಿದ್ದರಾಜು, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್. ನಂಜಪ್ಪ, ಜಿಪಂ ಸದಸ್ಯರಾದ ಬಿ.ಕೆ.ಬೊಮ್ಮಯ್ಯ, ಕೆ.ಎಸ್. ಮಹೇಶ್, ಅಶ್ವಿನಿ ವಿಶ್ವನಾಥ್, ಜಿಪಂ ಮಾಜಿ ಉಪಾಧ್ಯಕ್ಷ ಮಹದೇವಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಮುನಿರಾಜು, ಮುಖಂಡ ರಾದ ಸಿದ್ದಪ್ಪ, ಎಲ್.ಸುರೇಶ್, ಎಚ್.ಎನ್. ಬಸವರಾಜು, ಸೇರಿದಂತೆ ವಿವಿಧ ಘಟಕಗಳ ಮುಖಂಡರು, ಪದಾಧಿಕಾರಿಗಳಿದ್ದರು.

Translate »