ಚುನಾವಣೆ: 33 ಅಭ್ಯರ್ಥಿಗಳಿಂದ 50 ನಾಮಪತ್ರ ಸಲ್ಲಿಕೆ
ಮಂಡ್ಯ

ಚುನಾವಣೆ: 33 ಅಭ್ಯರ್ಥಿಗಳಿಂದ 50 ನಾಮಪತ್ರ ಸಲ್ಲಿಕೆ

April 24, 2018

ಮಂಡ್ಯ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸೋಮವಾರ ಘಟಾನುಘಟಿ ನಾಯಕರು ಸೇರಿದಂತೆ ಸುಮಾರು 33 ಅಭ್ಯರ್ಥಿಗಳಿಂದ 50 ನಾಮಪತ್ರಗಳು ಸಲ್ಲಿಕೆಯಾಗಿವೆ.

ಪಾಂಡವಪುರದಲ್ಲಿ ಸಿ.ಎಸ್.ಪುಟ್ಟರಾಜು, ಮಂಡ್ಯದಲ್ಲಿ ಎಂ.ಶ್ರೀನಿವಾಸ್, 5 ರೂ. ಡಾ.ಎಸ್.ಸಿ.ಶಂಕರೇಗೌಡ, ಶ್ರೀರಂಗಪಟ್ಟಣದಲ್ಲಿ ಕೆ.ಎಸ್.ನಂಜುಂಡೇಗೌಡ, ಮಳವಳ್ಳಿಯಲ್ಲಿ ಪಿ.ಎಂ.ನರೇಂದ್ರಸ್ವಾಮಿ, ಡಾ. ಕೆ. ಅನ್ನದಾನಿ, ಮದ್ದೂರಿನಲ್ಲಿ ಮಧು ಜಿ.ಮದೇಗೌಡ, ಕೆ.ಆರ್.ಪೇಟೆಯಲ್ಲಿ ಕೆ.ಸಿ.ನಾರಾಯಣಗೌಡ, ನಾಗಮಂಗಲದಲ್ಲಿ ಕೆ.ಸುರೇಶ್‍ಗೌಡ ಸೇರಿದಂತೆ ಘಟನಾನುಘಟಿ ನಾಯಕರು ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಮಂಡ್ಯ ವಿಧಾನಸಭಾ ಕ್ಷೇತ್ರ: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಎಂ.ಶ್ರೀನಿವಾಸ್, ಪಕ್ಷೇತರ ಅಭ್ಯರ್ಥಿಯಾಗಿ 5 ರೂ. ಡಾ. ಎಸ್.ಸಿ.ಶಂಕರೇಗೌಡ ನಾಮಪತ್ರ ಸಲ್ಲಿಸಿದರು.

ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರು ನಗರದ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅಪಾರ ಕಾರ್ಯಕರ್ತರು, ಅಭಿಮಾನಿಗಳು, ಜಾನಪದ ಕಲಾತಂಡಗಳೊಂದಿಗೆ ಮೈಸೂರು-ಬೆಂಗಳೂರು ಹೆದ್ದಾರಿ ಮಾರ್ಗವಾಗಿ ತಾಲೂಕು ಕಚೇರಿಗೆ ಮೆರವಣ ಗೆಯಲ್ಲಿ ತೆರಳಿ ಮಧ್ಯಾಹ್ನ ಸುಮಾರು 2 ಗಂಟೆ ಸಮಯದಲ್ಲಿ ನಾಮಪತ್ರ ಸಲ್ಲಿಸಿದರು.
ಜಿಪಂ ಸದಸ್ಯ ಯೋಗೇಶ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ, ಮಂಡ್ಯ ತಾಲೂಕು ಜೆಡಿಎಸ್ ಅಧ್ಯಕ್ಷ ತಿಮ್ಮೇಗೌಡ, ಬಿಎಸ್ಪಿ ಜಿಲ್ಲಾ ಸಂಚಾಲಕ ರಾಜು, ಮುಸ್ಲಿಂ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಮೊಯಿದ್ದೀನ್, ಕಿರುತೆರೆ ನಟಿ, ಜಿಪಂ ಮಾಜಿ ಸದಸ್ಯ ಕೆ.ಎಸ್.ವಿಜಯಾನಂದ, ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಇತರರಿದ್ದರು.

5 ರೂ ಡಾ. ಎಸ್.ಸಿ. ಶಂಕರೇಗೌಡ ಅವರು, ನಗರದ ಬಂದೀಗೌಡ ಬಡಾವಣೆಯಲ್ಲಿರುವ ತಮ್ಮ ನಿವಾಸದಿಂದ ಬೆಂಬಲಿಗರೊಂದಿಗೆ ಮೆರವಣ ಗೆಯಲ್ಲಿ ಬಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ವನದಲ್ಲಿರುವ ಸರ್.ಎಂ.ವಿ.ಪ್ರತಿಮೆ,ಅಂಬೇಡ್ಕರ್,ಬಾಬುಜಿ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು.

ಬಳಿಕ ಮಧ್ಯಾಹ್ನ ಸುಮಾರು 12.15ರ ವೇಳೆಗೆ ತಾಲೂಕು ಕಚೇರಿಗೆ ತೆರಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. 5 ರೂ. ವೈದ್ಯ ಎಂದೇ ಖ್ಯಾತಿಯಾಗಿರುವ ಡಾ. ಎಸ್.ಸಿ. ಶಂಕರೇಗೌಡ ಅವರು ನಾಮಪತ್ರದೊಂದಿಗೆ ಠೇವಣ ಹಣಕ್ಕಾಗಿ 5 ರೂ.ಗಳ ಕಾಯಿನ್‍ಗಳನ್ನೇ ನೀಡಿದ್ದು ವಿಶೇಷವಾಗಿತ್ತು.

ಜಯಕರ್ನಾಟಕ ಸಂಘಟನೆ ಕಾರ್ಯಾಧ್ಯಕ್ಷ ಎಸ್. ನಾರಾಯಣ್, ಜಿಲ್ಲಾಧ್ಯಕ್ಷ ಯೋಗಣ್ಣ, ವಕೀಲ ಕೇಶವಮೂರ್ತಿ, ಪತ್ನಿ, ಪುತ್ರಿ ಸೇರಿದಂತೆ ಹಲವರು ಮೆರವಣ ಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ಉಳಿದಂತೆ ಎಂ.ಇ.ಪಿ. ಪಕ್ಷದ ಅಭ್ಯರ್ಥಿಯಾಗಿ ಕಾವೇರಿ ಶ್ರೇಯಾ ಹಾಗೂ ಗುತ್ತಿಗೆದಾರ ಮಂಜುನಾಥ್ ಪಕ್ಷೇತರ ಹಾಗೂ ಡಿ.ಎಸ್. ಶಶಿಕುಮಾರ್ ಕೆಪಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಯಾಗಿ ನಾಮಪತ್ರ ಸಲ್ಲಿಸಿದರು.

ಮದ್ದೂರು ವಿಧಾನಸಭಾ ಕ್ಷೇತ್ರ : ಮಧು ಜಿ. ಮಾದೇಗೌಡ ಅವರು ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಹೊಳೆ ಅಂಜನೇಯಸ್ವಾಮಿಗೆ ವಿಶೇಷಪೂಜೆ ಸಲ್ಲಿಸಿದ ಬಳಿಕ ಮೆರವಣ ಗೆಯಲ್ಲಿ ತೆರಳಿ ಕಾಂಗ್ರೆಸ್‍ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಉಳಿದಂತೆ ಎಂಇಪಿಯಿಂದ ಹೀನಾಕೌಸರ್, ಪಕ್ಷೇತರ ಅಭ್ಯರ್ಥಿಗಳಾಗಿ ಜಾವೇದ್‍ಖಾನ್ ಹಾಗೂ ಕೆ.ಆರ್. ಶಿವಮಾದೇಗೌಡ ಅವರು ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರ: ಸಂಸದ ಸಿ.ಎಸ್.ಪುಟ್ಟರಾಜು ಅವರು ಜಾತ್ಯತೀತ ಜನತಾದಳ ಪಕ್ಷದ ಅಭ್ಯರ್ಥಿಯಾಗಿ ತಮ್ಮ ಸಹಸ್ರಾರು ಸಂಖ್ಯೆಯ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರೊಂದಿಗೆ ಮೆರವಣ ಗೆಯಲ್ಲಿ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಎಂಇಪಿ ಅಭ್ಯರ್ಥಿಯಾಗಿ ಮಹೇಶ್, ಪಕ್ಷೇತರ ಅಭ್ಯರ್ಥಿಗಳಾಗಿ ಇ.ಕೆ. ಪುಟ್ಟರಾಜು, ಮಹೇಶ್, ಸುಬ್ರಹ್ಮಣ್ಯ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ನಾಗಮಂಗಲ ವಿಧಾನಸಭಾ ಕ್ಷೇತ್ರ : ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಕೆ. ಸುರೇಶ್‍ಗೌಡ ಅವರು ಇಂದೂ ಸಹ 2ನೇ ಬಾರಿಗೆ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿಯಾಗಿ ಡಾ. ಪಾರ್ಥಸಾರಥಿ, ಎಂಇಪಿ ವತಿಯಿಂದ ವಾಸಿಂ ಉಲ್ಲಾಖಾನ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ರುಕ್ಮಿಣ ಮತ್ತು ಅಶೋಕ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಮಳವಳ್ಳಿ ವಿಧಾನಸಭಾ ಕ್ಷೇತ್ರ : ಮಳವಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ತಮ್ಮ ಅಪಾರ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಮಾಜಿ ಶಾಸಕ ಡಾ. ಕೆ. ಅನ್ನದಾನಿ ಜೆಡಿಎಸ್ ಕಾರ್ಯಕರ್ತರೊಂದಿಗೆ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಆರ್‍ಪಿಐನಿಂದ ಮಂಟ್ಯಲಿಂಗು, ಎಂ.ಇ.ಪಿ.ಯಿಂದ ಜಿ.ಎಸ್. ವಿಶ್ವನಾಥ್, ಐಎನ್‍ಪಿಪಿ ಅಭ್ಯರ್ಥಿಯಾಗಿ ಶಶಿಕುಮಾರ್, ಆರ್.ಎಂ.ವಿ.ಪಿ. ಅಭ್ಯರ್ಥಿಯಾಗಿ ಪಿ.ಪಿ. ವೆಂಕಟೇಶ್ ಅವರು ನಾಮಪತ್ರ ಸಲ್ಲಿಸಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ : ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರೈತ ನಾಯಕ ಕೆ.ಎಸ್.ನಂಜುಂಡೇಗೌಡ ಅವರು ಬಿಜೆಪಿ ಕಾರ್ಯಕರ್ತರೊಟ್ಟಿಗೆ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಉಳಿದಂತೆ ಎಎಪಿಯಿಂದ ವೆಂಕಟೇಶ್, ಪಕ್ಷೇತರ ಅಭ್ಯರ್ಥಿಯಾಗಿ ಕೆಂಪೇಗೌಡ ಅವರು ನಾಮಪತ್ರ ಸಲ್ಲಿಸಿದರು.

ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರ : ಕೆ.ಸಿ. ನಾರಾಯಣಗೌಡ ಅವರು ನಾಮಪತ್ರ ಸಲ್ಲಿಸಿದರೆ, ಬಿಜೆಪಿ ಅಭ್ಯರ್ಥಿಯಾಗಿ ಬಿ.ಸಿ.ಮಂಜುನಾಥ್, ಪಕ್ಷೇತರ ಅಭ್ಯರ್ಥಿಗಳಾಗಿ ಕುಮಾರ್ ಅಲಿಯಾಸ್ ಕಿರಣ್‍ಕುಮಾರ್ ಮತ್ತು ಮಂಜುಳಾ ಅವರು ನಾಮಪತ್ರ ಸಲ್ಲಿಸಿದರು.

Translate »