ಮೈಸೂರು: ಹಲವು ಕಾರಣಗಳಿಂದ ಬಾಕಿ ಉಳಿದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಯಲ್ಲಿ ಕರ್ನಾಟಕ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ, ಇಂದು ಮೈಸೂರಲ್ಲಿ ವಿಭಾಗ ಮಟ್ಟದ ಏಳು ಜಿಲ್ಲೆಗಳ ಡಿಸಿ ಮತ್ತು ಎಸ್ಪಿಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮೈಸೂರು ಕಂದಾಯ ವಿಭಾಗದ ವ್ಯಾಪ್ತಿಗೆ ಬರುವ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು, ಪುರಸಭೆ, ಪಟ್ಟಣ ಪಂಚಾಯ್ತಿ, ನಗರಸಭೆಗಳ ಬಾಕಿ ಉಳಿದಿರುವ ಚುನಾ ವಣೆಗೆ ನಡೆಸಿರುವ ತಯಾರಿ ಕುರಿತು ಚುನಾ ವಣಾ ಆಯುಕ್ತರಿಗೆ ಮಾಹಿತಿ ನೀಡಿದರು. ತಮ್ಮಲ್ಲಿ ಚುನಾವಣೆಗಳಿಲ್ಲದ ಕಾರಣ ಉಡುಪಿ ಜಿಲ್ಲೆಯ ಅಧಿಕಾರಿಗಳು ಪಾಲ್ಗೊಂ ಡಿರಲಿಲ್ಲ. ಮಾರ್ಚ್ 3ರಂದು ರಾಜ್ಯದ 101 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿ ಯಲಿದ್ದು, ಅವುಗಳಿಗೆ ಸಂವಿಧಾನ ಬದ್ಧವಾಗಿ ಅವಧಿಗೂ ಮುನ್ನ ಚುನಾವಣೆ ನಡೆಸ ಬೇಕಾಗಿರುವುದರಿಂದ ಮೊದಲ ಹಂತದಲ್ಲಿ 3 ನಗರ ಪಾಲಿಕೆ ಸೇರಿ 108 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುತ್ತಿದ್ದೇವೆ ಎಂದು ಶ್ರೀನಿವಾಸಾಚಾರಿ ಸುದ್ದಿಗಾರರಿಗೆ ತಿಳಿಸಿದರು. ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡಿದ್ದು, ಅಂತಿಮ ಪಟ್ಟಿಯನ್ನು ಸಿದ್ಧಪಡಿಸುವುದು, ಸಾರ್ವಜನಿಕರಿಂದ ಆಕ್ಷೇಪಣೆ ಪಡೆದು ಪರಿಶೀಲಿಸಿ ಸಮಜಾ ಯಿಷಿ ನೀಡುವುದು, ವಿವಿಧ ನ್ಯಾಯಾಲಯ ಗಳಲ್ಲಿ ಬಾಕಿ ಇರುವ ಚುನಾವಣಾ ಸಂಬಂಧದ ಪ್ರಕರಣಗಳ ಸ್ಥಿತಿಗಳ ಬಗ್ಗೆ ಏಳೂ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಕೆಲ ಸಲಹೆ-ಮಾರ್ಗದರ್ಶನ ನೀಡಿದ್ದೇನೆ ಎಂದೂ ತಿಳಿಸಿದರು.
ಚುನಾವಣೆಗೆ ಸಂಬಂಧಿಸಿದ ಗೊಂದಲ ಗಳನ್ನು ನಿವಾರಿಸಿಕೊಂಡು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಮತದಾನ ನಡೆಸಲು ಪೂರ್ವ ತಯಾರಿ ನಡೆಸು ವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿ ರುವುದಾಗಿ ತಿಳಿಸಿದ ಅವರು, ಮತದಾನ ಕೇಂದ್ರಗಳಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲು ಆಯಾ ಜಿಲ್ಲೆಯ ಎಸ್ಪಿ ಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಮೂರು ಹಂತಗಳಲ್ಲಿ ತರಬೇತಿ ನೀಡಿ ಚುನಾವಣೆಗೆ ತಯಾರಾಗುವ ಬಗ್ಗೆಯೂ, ಚುನಾವಣಾ ಆಯೋಗದ ಮಾರ್ಗ ಸೂಚಿಗಳನ್ನು ಓದಿ ಅದರಂತೆ ಕಾರ್ಯ ನಿರ್ವಹಿಸಬೇಕೆಂದು ಸಲಹೆ ನೀಡಿದ್ದೇನೆ ಎಂದೂ ಆಯುಕ್ತರು ಹೇಳಿದರು. ಈಗಾ ಗಲೇ 2 ವಿಭಾಗಗಳಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಲಾಗಿದ್ದು, ಮೈಸೂರು ಕಂದಾಯ ವಿಭಾಗದ ಏಳೂ ಜಿಲ್ಲೆಗಳಲ್ಲಿ ಚುನಾವಣೆಗೆ ಸರ್ವ ರೀತಿಯಲ್ಲಿ ಸಜ್ಜುಗೊಳ್ಳಲು ಬೇಕಾದ ಅಗತ್ಯ ಮಾಹಿತಿಯನ್ನು ನೀಡಿದ್ದೇನೆ ಎಂದು ಶ್ರೀನಿವಾಸಾಚಾರಿ ತಿಳಿಸಿದರು. ಮೈಸೂರು ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ, ಎಸ್ಪಿ ಅಮಿತ್‍ಸಿಂಗ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.