ಎಂಸಿಎಂಸಿಗೆ ಚುನಾವಣಾ ವೆಚ್ಚ ವೀಕ್ಷಕರ ಭೇಟಿ
ಕೊಡಗು

ಎಂಸಿಎಂಸಿಗೆ ಚುನಾವಣಾ ವೆಚ್ಚ ವೀಕ್ಷಕರ ಭೇಟಿ

March 23, 2019

ಮಡಿಕೇರಿ: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕ ಸಂದೀಪ್ ಕುಮಾರ್ ಮಿಶ್ರ ಅವರು ಶುಕ್ರವಾರ ನಗರದ ಜಿಲ್ಲಾಧಿಕಾ ರಿಯವರ ಕಚೇರಿಯಲ್ಲಿ ತೆರೆಯಲಾಗಿರುವ ಮಾಧ್ಯಮ ಜಾಹೀರಾತು ದೃಢೀಕರಣ ಮತ್ತು ಮೇಲ್ವಿಚಾರಣಾ ಸಮಿತಿಗೆ(ಎಂಸಿಎಂಸಿ) ಭೇಟಿ ನೀಡಿ ಪರಿಶೀಲಿಸಿದರು.

ಮಾಧ್ಯಮ ದೃಢೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ಕಾರ್ಯ ಚಟುವಟಿಕೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಚುನಾವಣಾ ವೆಚ್ಚ ವೀಕ್ಷಕರು ಸ್ಥಳೀಯ ವಾಹಿನಿಗಳು ಮತ್ತು ಪತ್ರಿಕೆಗಳಲ್ಲಿ ಪ್ರಕಟವಾಗುವ ಜಾಹೀರಾತುಗಳ ವೆಚ್ಚ ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರವಾಗುವ ಮಾಹಿತಿ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಮತ್ತಿತರ ಬಗ್ಗೆ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್, ವಾರ್ತಾಧಿಕಾರಿ ಚಿನ್ನಸ್ವಾಮಿ, ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ ಅವರು ಎಂಸಿಎಂಸಿ ಕಾರ್ಯ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಸಮಿತಿ ಸದಸ್ಯರಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆಂಚಪ್ಪ, ಸಹಾಯಕ ಪರಿಸರ ಅಧಿಕಾರಿ ಸುಧಾ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀದೇವಿ, ಬಿ.ಕೆ.ಸತೀಶ್ ಇತರರು ಇದ್ದರು.

 

Translate »