ದಕ್ಷಿಣ ಪದವೀಧರ ಕ್ಷೇತ್ರದಿಂದ ಚುನಾವಣೆ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ನಾಮಪತ್ರ ಸಲ್ಲಿಕೆ
ಮೈಸೂರು

ದಕ್ಷಿಣ ಪದವೀಧರ ಕ್ಷೇತ್ರದಿಂದ ಚುನಾವಣೆ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ನಾಮಪತ್ರ ಸಲ್ಲಿಕೆ

May 20, 2022

ಮೈಸೂರು, ಮೇ ೧೯-ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಗುರುವಾರ ಮೈಸೂರಲ್ಲಿ ನಾಮಪತ್ರ ಸಲ್ಲಿಸಿದರು. ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಹಾ ಯಕ ಪ್ರಾದೇಶಿಕ ಆಯುಕ್ತೆ ರೂಪಶ್ರೀ ಅವರಲ್ಲಿ ರವಿಶಂಕರ್ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು. ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕ್ರೀಡಾ ಸಚಿವ ನಾರಾಯಣಗೌಡ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಸೇರಿದಂತೆ ಇನ್ನಿತರರು ಪ್ರಾದೇಶಿಕ ಕಚೇರಿ ಮುಂದೆ ಉಪಸ್ಥಿತರಿದ್ದರು.

ದಕ್ಷಿಣ ಪದವೀಧರ ಕ್ಷೇತ್ರವು ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಯನ್ನು ಒಳಗೊಂಡಿದೆ. ಜೂನ್ ೧೩ರಂದು ಚುನಾವಣೆ ನಡೆಯಲಿದ್ದು, ಇಂದು ಅಧಿಸೂಚನೆ ಹೊರ ಬಿದ್ದಿದೆ.

Translate »