ಚುನಾವಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ ಚುನಾವಣಾ ವೀಕ್ಷಕರು
ಮೈಸೂರು

ಚುನಾವಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ ಚುನಾವಣಾ ವೀಕ್ಷಕರು

April 25, 2018

ಮೈಸೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪಿರಿಯಾ ಪಟ್ಟಣ ಮತ್ತು ಕೆ.ಆರ್.ನಗರ ಕ್ಷೇತ್ರಗಳಿಗೆ ಸಾಮಾನ್ಯ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿರುವ ಅಲೋಕ್ ಆವಸ್ತಿ ಅವರು ಬುಧವಾರ ಈ ಕ್ಷೇತ್ರಗಳ ಚುನಾವಣಾ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಪರಿಶೀಲಿಸಿದರು. ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಿರ್ವಹಿಸಲಾಗುತ್ತಿರುವ ತಂತ್ರಜ್ಞಾನ ಆಧಾರಿತ ಸುಗಮ ಮತ್ತು ಸಮಾಧಾನ್ ಸೌಲಭ್ಯಗಳನ್ನು ಪರಿಶೀಲಿಸಿ, ತೃಪ್ತಿ ವ್ಯಕ್ತಪಡಿಸಿದರು. ದೂರುಗಳಿಗೆ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ರಿಜಿಸ್ಟರ್ ನಿರ್ವಹಿಸಬೇಕು ಎಂದು ತಿಳಿಸಿದರು. ಅಂಚೆ ಮತಪತ್ರಗಳ ಅಗತ್ಯಗಳು, ವಾಹನಗಳ ಬೇಡಿಕೆಗಳು, ವಲ್ನರೆಬಿಲಿಟಿ ಮ್ಯಾಪಿಂಗ್, ಮತಗಟ್ಟೆಗಳ ಸೌಲಭ್ಯಗಳು ಮುಂತಾದವುಗಳ ಪರಿ ಶೀಲಿಸಿದರು. ಈ ಸಂದರ್ಭದಲ್ಲಿ ಈ ಕ್ಷೇತ್ರಗಳು ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.

Translate »