ಚುನಾವಣಾ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ಪಡೆದ ಚುನಾವಣಾ ವೀಕ್ಷಕರು

ಮಡಿಕೇರಿ: ಕೊಡಗು-ಮೈಸೂರು ಲೋಕಸಭಾ ಚುನಾವಣಾ ಸಾಮಾನ್ಯ ವೀಕ್ಷಕ ರಾದ ಕುಲದೀಪ್ ನಾರಾಯಣ ಮತ್ತು ಪೊಲೀಸ್ ವೀಕ್ಷಕ ಡಾ.ವಿಕಾಸ್ ಪಾಠಕ್ ಅವರು ಲೋಕಸಭಾ ಚುನಾವಣೆ ಸಂಬಂ ಧಿಸಿದಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಸುಮನ್ ಡಿ.ಪೆನ್ನೇಕರ್ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಕೆ.ಲಕ್ಷ್ಮಿ ಪ್ರಿಯಾ ಅವರಿಂದ ಮಾಹಿತಿ ಪಡೆದರು.

ನಗರದ ಸುದರ್ಶನ ಅತಿಥಿ ಗೃಹದಲ್ಲಿ ಶುಕ್ರವಾರ ಲೋಕಸಭಾ ಚುನಾವಣೆಯನ್ನು ಶಾಂತಿಯುತ ಹಾಗೂ ವ್ಯವಸ್ಥಿತವಾಗಿ ನಡೆ ಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಮತಗಟ್ಟೆ ಕೇಂದ್ರಗಳ ಸುಸ್ಥಿತಿ, ಚೆಕ್ ಪೋಸ್ಟ್‍ಗಳ ಕಾರ್ಯ ನಿರ್ವಹಣೆ, ವಲ್ನ ರಬಲ್ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿ ಸುವುದು, ಮಾದರಿ ನೀತಿ ಸಂಹಿತೆ ಉಲ್ಲಂ ಘನೆಯಾಗದಂತೆ ಮುನ್ನೆಚ್ಚರಿಕೆ ವಹಿಸು ವುದು, ಸಿ-ವಿಜಿಲ್ ಗಮನಹರಿಸುವುದು, ರಾಜಕೀಯ ಪಕ್ಷದ ತಾರಾ ಪ್ರಚಾರಕರ ಸಭೆ-ಸಮಾರಂಭಗಳು ಹಾಗೂ ಮತದಾನದ ಮಹತ್ವ ಕುರಿತು ಹೆಚ್ಚಿನ ಜಾಗೃತಿ ಮೂಡಿಸು ವುದು ಮತ್ತಿತರ ಬಗ್ಗೆ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಲೋಕಸಭಾ ಚುನಾವಣೆಯನ್ನು ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಮತಗಟ್ಟೆ ಅಧಿಕಾರಿಗಳಿಗೆ ಒಂದು ಸುತ್ತಿನ ತರಬೇತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಗೆ ಹೊಂದಿಕೊಂಡಿರುವ ಅಂತರ ರಾಜ್ಯ ಗಡಿಭಾಗ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 14 ಚೆಕ್‍ಪೊಸ್ಟ್ ಸ್ಥಾಪಿಸಲಾಗಿದ್ದು, ಚೆಕ್‍ಪೋಸ್ಟ್‍ಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಳಿಯಲ್ಲಿ ಕಾರ್ಯ ನಿರ್ವ ಹಿಸುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ವಲ್ನ ರಬಲ್ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿ ಸಲಾಗಿದೆ. ಶಾಂತಿಯುತವಾಗಿ ಚುನಾ ವಣೆ ನಡೆಸಲು ಪೊಲೀಸ್ ಇಲಾಖೆ ಯಿಂದ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮಾಹಿತಿ ನೀಡಿದರು.
ಸ್ವೀಪ್ ಸಮಿತಿ ಅಧ್ಯಕ್ಷರಾದ ಕೆ.ಲಕ್ಷ್ಮಿಪ್ರಿಯಾ ಅವರು ಮತದಾನದ ಮಹತ್ವ ಕುರಿತು ಜಾಥ, ರ್ಯಾಲಿ, ಓಟ, ಸಭೆ-ಸಮಾ ರಂಭ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿ ಬೋಧನೆ, ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್ ಪ್ರಾತ್ಯಕ್ಷಿಕೆ, ಬೀದಿನಾಟಕ ಹೀಗೆ ನಾನಾ ಚಟುವಟಿಕೆ ಕೈಗೊಳ್ಳಾಗಿದೆ ಎಂದು ಅವರು ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾ ಧಿಕಾರಿ ಪಿ.ಶಿವರಾಜು, ಸಹಾಯಕ ಚುನಾವಣಾ ಧಿಕಾರಿಗಳಾದ ಟಿ.ಜವರೇಗೌಡ, ಶ್ರೀನಿವಾಸ್ ಅವರು ಲೋಕಸಭಾ ಚುನಾವಣೆ ಸಂಬಂಧ ಹಲವು ಮಾಹಿತಿ ನೀಡಿದರು. ತಹಶೀಲ್ದಾರ ರಾದ ನಟೇಶ್, ಗೋವಿಂದ ರಾಜು, ವೀಕ್ಷಕರ ನೋಡಲ್ ಅಧಿಕಾರಿಗಳಾದ ನಟರಾಜು, ಪ್ರಮೋದ್ ಇತರರು ಇದ್ದರು.