ನ.17 ರಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ
ಮಂಡ್ಯ

ನ.17 ರಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

November 12, 2020

ಮಂಡ್ಯ, ನ.11- ಡಿಸಿಸಿ ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯು ನ.17 ರಂದು ನಡೆಯಲಿದ್ದು, ಕಾಂಗ್ರೆಸ್ ಬೆಂಬಲಿತ 8 ಮಂದಿ ನಿರ್ದೇಶಕರು ಮತ್ತು ಮುಖಂಡರು, ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬುಧ ವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಎಂ.ನರೇಂದ್ರಸ್ವಾಮಿ, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಚುನಾವಣೆ ನಡೆಯುವ ಒಂದು ದಿನದ ಮುಂಚಿತವಾಗಿ ಅಭ್ಯರ್ಥಿ ಘೋಷಣೆ ಮಾಡಲಾಗುವುದು. ನಮ್ಮಲ್ಲಿ ಪೈಪೋಟಿ ಇಲ್ಲ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದು ಕೊಂಡು, ಯಾವುದೇ ಗೊಂದಲ ವಿಲ್ಲದಂತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಮಾಡಿಕೊಳ್ಳುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಡಿಸಿಸಿ ಬ್ಯಾಂಕ್‍ನ ಅಧಿಕಾರ ಹಿಡಿ ಯುವುದು ಮತ್ತು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ನಮ್ಮ ನಾಯಕರಾದ ಡಿ.ಕೆ.ಶಿವ ಕುಮಾರ್ ಬಳಿ ಚರ್ಚೆ ನಡೆಸಲಾಗಿದೆ. ಜೊತೆಗೆ ಮಂಡ್ಯ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಅಧಿಕಾರ ಹಿಡಿಯುವಲ್ಲಿ ಬೆನ್ನಲುಬಾಗಿ ನಿಂತ ನಮ್ಮ ನಾಯಕರುಗಳನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸುವುದಾಗಿತ್ತು. ಅದೇರೀತಿ ನಮ್ಮ ಜಿಲ್ಲೆಯ ಡಿಸಿಸಿ ಬ್ಯಾಂಕ್ ಮತ ದಾರರು ಸಹ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷಾತೀತ ವಾಗಿ ಸಹಕರಿಸಿದ್ದಾರೆ ಎಂದರು.

ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ರಮೇಶ್‍ಬಾಬು ಬಂಡಿಸಿದ್ದೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ, ಮಹಿಳಾಧ್ಯಕ್ಷೆ ಅಂಜನಾ ಶ್ರೀಕಾಂತ್ ಸೇರಿ ದಂತೆ ಡಿಸಿಸಿ ಬ್ಯಾಂಕ್ ಕಾಂಗ್ರೆಸ್ ಬೆಂಬ ಲಿತ ನಿರ್ದೇಶಕರು ಮತ್ತು ಮುಖಂಡರು ಹಾಜರಿದ್ದರು. ಈ ನಡುವೆ ಜೆಡಿಎಸ್ ಬೆಂಬ ಲಿತ 4 ಮತ್ತು ಬಿಜೆಪಿ ಸರ್ಕಾರ ಮಟ್ಟದ ನಾಮ ನಿರ್ದೇಶಿತ ಮೂವರು ನಿರ್ದೇಶಕರು ಸೇರಿ ಒಟ್ಟು 7 ಮತಗಳ ಜೊತೆಗೆ ಕಾಂಗ್ರೆಸ್‍ನ ಬೆಂಬಲಿತ ನಿರ್ದೇಶಕರುಗಳಲ್ಲಿ ಯಾರಾದರೂ ಅತೃಪ್ತರಿದ್ದರೇ ಅವರನ್ನು ಸೆಳೆದು ಅಧಿಕಾರ ಹಿಡಿಯಲು ಜೆಡಿಎಸ್ ತಂತ್ರಗಾರಿಕೆ ಹೆಣೆ ಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ನ.17ರಂದು ರಾಜಕೀಯ ಮೇಲಾಟ ಏನೆಂಬುದನ್ನು ಕಾದು ನೋಡ ಬೇಕಿದೆ.

Translate »