ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ನಾಳೆ ಸುಪ್ರೀಂಕೋರ್ಟ್‍ಗೆ ಕ್ಷೇತ್ರ ಪುನರ್ ವಿಂಗಡಣೆ,  ಹಿಂದುಳಿದ ವರ್ಗದ ಮೀಸಲಾತಿ ವರದಿ ಸಲ್ಲಿಕೆ
ಮೈಸೂರು

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ನಾಳೆ ಸುಪ್ರೀಂಕೋರ್ಟ್‍ಗೆ ಕ್ಷೇತ್ರ ಪುನರ್ ವಿಂಗಡಣೆ, ಹಿಂದುಳಿದ ವರ್ಗದ ಮೀಸಲಾತಿ ವರದಿ ಸಲ್ಲಿಕೆ

July 21, 2022

ಮೈಸೂರು,ಜು.20(ಪಿಎಂ)-ರಾಜ್ಯ ದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಜು.22ರಂದು ಸುಪ್ರೀಂ ಕೋರ್ಟ್‍ಗೆ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ವರದಿ ಸಲ್ಲಿಸುತ್ತಿದ್ದು, ಆ ಬಳಿಕ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚುನಾವಣೆ ಪ್ರಕ್ರಿಯೆ ನಡೆಸಲು ಕ್ರಮ ಕೈಗೊಳ್ಳಲಾಗು ವುದು ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಿಂದ ಹೆಲಿಕಾಫ್ಟರ್ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬುಧವಾರ ಬೆಳಗ್ಗೆ ಆಗಮಿಸಿದ ಅವರು, ಇದೇ ವೇಳೆ ಮಾಧ್ಯಮದವರಿಗೆ ಪ್ರಕ್ರಿಯೆ ನೀಡಿದರು. ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾ ವಣೆಗಳು ಯಾವಾಗ ನಡೆಯುತ್ತವೆ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಕ್ಷೇತ್ರ ಪುನರ್ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ಆಯೋಗ ವರದಿ ಯನ್ನು ಜು.22ರಂದು ಸುಪ್ರೀಂಕೋರ್ಟ್‍ಗೆ ಸಲ್ಲಿಸಲಾ ಗುವುದು. ಬಳಿಕ ಸುಪ್ರೀಂಕೋರ್ಟ್ ನಿರ್ದೇಶನಕ್ಕೆ ಅನು ಗುಣವಾಗಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು. ಮೈಸೂರು ಮೇಯರ್ ಚುನಾವಣೆ ಸಂಬಂಧ ಪ್ರತಿಕ್ರಿಯಿಸಿ, ಅದಕ್ಕೂ ಮೀಸಲಾತಿ ವರದಿ ಬಂದ ಕೂಡಲೇ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ರಾಜ್ಯಕ್ಕೆ 8,800 ಕೋಟಿ ಜಿಎಸ್‍ಟಿ ಪರಿಹಾರ: ರಾಜ್ಯಕ್ಕೆ ಜಿಎಸ್‍ಟಿ ಪರಿಹಾರ ಸಂಬಂಧ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಯವರು, ಜಿಎಸ್‍ಟಿ ಸಂವಿಧಾನಾತ್ಮಕ ವಾದದ್ದು. ಇದು ಸಂಸತ್‍ನಲ್ಲಿ ಅನುಮೋದನೆಗೊಂಡಿರುವ ಕಾಯ್ದೆಯಾ ಗಿದೆ. ಕಾಯ್ದೆ ಜಾರಿ ವೇಳೆಯೇ ಐದು ವರ್ಷ ರಾಜ್ಯಗಳಿಗೆ ಜಿಎಸ್‍ಟಿ ಪರಿಹಾರ ನೀಡಲಾಗುವುದು ಎಂದು ನಿರ್ಧಾರ ಕೈಗೊಳ್ಳಲಾ ಗಿತ್ತು. ಈ ನಡುವೆ ಕೋವಿಡ್ ಸಂದರ್ಭದಲ್ಲಿ ನಮಗೆ ಯಾವುದೇ ರೀತಿಯ ತೆರಿಗೆ ಸಂಗ್ರಹ ಸಾಧ್ಯವಾಗಿರಲಿಲ್ಲ. ಅದಾಗ್ಯೂ ಕೇಂದ್ರ ಸರ್ಕಾರ ಜಿಎಸ್‍ಟಿ ಪರಿಹಾರ ನೀಡಿದೆ. ಮೊನ್ನೆಯಷ್ಟೇ 8,800 ಕೋಟಿ ರೂ. ಜಿಎಸ್‍ಟಿ ಪರಿಹಾರ ರಾಜ್ಯಕ್ಕೆ ಬಂದಿದೆ. ಬಾಕಿ ಉಳಿದಿರುವುದನ್ನು ಕೇಂದ್ರ ನೀಡಲಿದ್ದು, ಇದರಲ್ಲಿ ಯಾವುದೇ ತೊಡುಕು ಇಲ್ಲ ಎಂದು ಹೇಳಿದರು. ಇಂದು ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವದಲ್ಲಿ ಪಾಲ್ಗೊಂಡು ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದು, ಕಬಿನಿ ಮತ್ತು ಕೆಆರ್‍ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದೇನೆ. ಆಷಾಢ ಮಾಸದಲ್ಲಿ ಎರಡೂ ಜಲಾಶಯಗಳು ಭರ್ತಿಯಾಗಿರುವುದು ಅಪರೂಪ. ಉತ್ತಮ ಮಳೆಯಾಗಿದ್ದು, ರೈತರ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ. ಆ ಮೂಲಕ ಕೃಷಿಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗಿರುವುದು ಹರ್ಷ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಹೆಲಿಕಾಫ್ಟರ್ ನಲ್ಲಿ ಅವರ ಪತ್ನಿ ಚೆನ್ನಮ್ಮ, ಸಚಿವರಾದ ಗೋವಿಂದ ಕಾರಜೋಳ, ಎಸ್.ಟಿ.ಸೋಮ ಶೇಖರ್ ಸಹ ಆಗಮಿಸಿದರು. ಮುಖ್ಯಮಂತ್ರಿಗಳು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿ ಸುತ್ತಿದ್ದಂತೆ ಸ್ಥಳೀಯ ಬಿಜೆಪಿ ಮುಖಂಡರು ಅವರಿಗೆ ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದರು. ಬಳಿಕ ಮುಖ್ಯಮಂತ್ರಿಗಳು ರಸ್ತೆ ಮೂಲಕ ಚಾಮುಂಡಿಬೆಟ್ಟಕ್ಕೆ ತೆರಳಿದರು. ಶಾಸಕ ಎಲ್.ನಾಗೇಂದ್ರ, ಮಾಜಿ ಸಂಸದ ಸಿ.ಹೆಚ್.ವಿಜಯಶಂಕರ್ ಮತ್ತಿತರರು ಹಾಜರಿದ್ದರು.

Translate »