ವಿಧಾನಸಭೆಯಿಂದ ಪರಿಷತ್‌ಗೆ ಚುನಾವಣೆ ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗಳು
ಮೈಸೂರು

ವಿಧಾನಸಭೆಯಿಂದ ಪರಿಷತ್‌ಗೆ ಚುನಾವಣೆ ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗಳು

May 24, 2022

ನಾಗರಾಜ್ ಯಾದವ್ ಅಬ್ದುಲ್ ಜಬ್ಬಾರ್
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕ ಮಾಂಡ್ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಮಾಡಿದ್ದು, ಕಾಂಗ್ರೆಸ್ ವಕ್ತಾರ ನಾಗರಾಜ್ ಯಾದವ್ ಹಾಗೂ ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿರುವ ಅಬ್ದುಲ್ ಜಬ್ಬಾರ್
ಅವರಿಗೆ ಅವಕಾಶ ನೀಡಿದೆ. ಆ ಮೂಲಕ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದ ರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹಗ್ಗ ಜಗ್ಗಾಟಕ್ಕೆ ಬೇಸತ್ತ ಹೈಕಮಾಂಡ್ ಹೊಸ ಅಭ್ಯರ್ಥಿಗಳಿಗೆ ಮಣೆ ಹಾಕಿದೆ. ರಾಜ್ಯ ಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕೈ ಚಳಕ ಇಲ್ಲಿ ಕೆಲಸ ಮಾಡಿದೆ ಎನ್ನಲಾಗಿದೆ. ಬಿ.ಕೆ.ಹರಿಪ್ರಸಾದ್ ಅವರು ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಅವರ ಅಭ್ಯರ್ಥಿ ಎಂ.ಆರ್.ಸೀತಾರಾA ಅವರಿಗೆ ಈ ಬಾರಿ ಮಣೆ ಹಾಕಬಾರದು ಎಂದು ಒತ್ತಡ ಹೇರಿದ್ದರು ಎನ್ನಲಾಗಿದೆ. ಈ ನಡುವೆ ಏಕಾಏಕಿ ದೆಹಲಿಯಲ್ಲಿ ಮಧ್ಯ ಪ್ರವೇಶ ಮಾಡಿದ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಮಹತ್ವದ ಪಾತ್ರ ವಹಿಸಿ ದರು ಎಂದು ತಿಳಿದು ಬಂದಿದೆ. ನಾಮಪತ್ರ ಸಲ್ಲಿಸಲು ನಾಳೆ (ಮೇ ೨೪) ಕಡೆಯ ದಿನವಾಗಿದ್ದು, ಈ ಇಬ್ಬರೂ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಕೆಲವೇ ಗಂಟೆಗಳು ಬಾಕಿ ಇದ್ದು, ಅಭ್ಯರ್ಥಿಗಳ
ಆಯ್ಕೆ ಮಾಡುವಲ್ಲಿ ಬಿಜೆಪಿ ಮತ್ತು ಜೆಡಿಎಸ್ ತಿಣುಕಾಡುತ್ತಿವೆ.

Translate »