ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮೈಸೂರು ಜಿಲ್ಲಾ ಕಾರ್ಯಕಾರಿ ಸಮಿತಿಗೆ ಜೂ.13ರಂದು ಚುನಾವಣೆ ನಡೆಯಲಿದ್ದು, ಮೈಸೂರಿನ 4 ಕೇಂದ್ರಗಳಲ್ಲಿ ಅಂದು ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. 2019-24ನೇ ಸಾಲಿನ ಕಾರ್ಯಕಾರಿ ಸಮಿತಿಯ 31 ಸ್ಥಾನಗಳಿಗೆ ಈಗಾಗಲೇ ಅವಿರೋಧ ಆಯ್ಕೆಯಾಗಿದ್ದು, ಇನ್ನುಳಿದ 30 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 22 ಇಲಾಖೆಗಳ 112 ನೌಕರರು ಸ್ಪರ್ಧಿಸಿದ್ದಾರೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್.ಕೆ.ರಾಮು ತಿಳಿಸಿದ್ದಾರೆ.
ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ವಾಣಿಜ್ಯ ತೆರಿಗೆ ಇಲಾಖೆ, ನ್ಯಾಯಾಂಗ ಇಲಾಖೆ, ಸರ್ಕಾರಿ ಮುದ್ರಣಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರೇಷ್ಮೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮತದಾರರಿಗೆ ಮೈಸೂರು ಜೆಎಲ್‍ಬಿ ರಸ್ತೆಯಲ್ಲಿರುವ ಸರ್ಕಾರಿ ಮಹಾರಾಣಿ ಮಹಿಳಾ ಕಲಾ ಕಾಲೇಜು ಆವರಣ, ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಾಥಮಿಕ ಶಾಲಾ ವಿಭಾಗದವರಿಗೆ ಎನ್‍ಟಿ ಎಂಎಸ್ ಶಾಲೆ ಆವರಣ, ಜಿಲ್ಲಾ ಆರೋಗ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ತಾಂತ್ರಿಕ ಇಲಾಖೆ ನೌಕರರಿಗೆ ನಜರ್‍ಬಾದ್‍ದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಪ್ರಾದೇಶಿಕ ಸಾರಿಗೆ ಇಲಾಖೆ, ಉದ್ಯೋಗ ಮತ್ತು ತರಬೇತಿ ಇಲಾಖೆ(ಐಟಿಐ), ಪಶು ಸಂಗೋಪನಾ ಇಲಾಖೆ, ಸಹಕಾರ ಇಲಾಖೆ, ಅಬಕಾರಿ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಖಜಾನೆ ಇಲಾಖೆ, ಪೊಲೀಸ್ ಆಡಳಿತ ಇಲಾಖೆ, ತೋಟಗಾರಿಕೆ ಇಲಾಖೆಯ ಸಿಬ್ಬಂದಿಗೆ ಧನ್ವಂತರಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಕಛೇರಿ ಆವರಣದಲ್ಲಿ ಮತಗಟ್ಟೆ ಕೇಂದ್ರ ಗಳನ್ನು ಸ್ಥಾಪಿಸಲಾಗುವುದು ಎಂದು ಚುನಾವಣಾಧಿಕಾರಿ ಹರೀಶ್‍ಕುಮಾರ್ ತಿಳಿಸಿದ್ದಾರೆ.