ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ
ಚಾಮರಾಜನಗರ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ

May 27, 2018

ಚಾಮರಾಜನಗರ:  ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗಾಗಿ ಜಿಲ್ಲೆಯಲ್ಲಿ 5 ಮತಗಟ್ಟೆ ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ಹಾಗೂ ಸಹಾಯಕ ಚುನಾವ ಣಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ಸ್ಥಾಪಿಸಲಾಗಿರುವ ಮತಗಟ್ಟೆ ಕುರಿತು ಚರ್ಚಿಸಲು ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ಮತದಾನ ಕ್ಕಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಚಾಮರಾಜ ನಗರ, ಗುಂಡ್ಲುಪೇಟೆ, ಯಳಂದೂರು, ಕೊಳ್ಳೇಗಾಲದ ತಾಲೂಕು ಕಚೇರಿಯ ಮಿನಿ ವಿಧಾನಸೌಧsದ ಮೀಟಿಂಗ್ ಹಾಲ್ ಹಾಗೂ ಹನೂರಿನ ವಿಶೇಷ ತಹಶೀಲ್ದಾರ್ ಕಚೇರಿಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಗುಂಡ್ಲುಪೇಟೆ ತಾಲೂಕಿನಲ್ಲಿ 285 ಪುರು ಷರು, 61 ಮಹಿಳÉಯರೂ ಸೇರಿದಂತೆ 346 ಮತದಾರರಿದ್ದಾರೆ. ಚಾಮರಾಜ ನಗರ ತಾಲೂಕಿನಲ್ಲಿ 438 ಪುರುಷರು, 232 ಮಹಿಳೆಯರು ಸೇರಿದಂತೆ 670 ಮತದಾರರಿದ್ದಾರೆ. ಯಳಂದೂರು ತಾಲೂಕಿ ನಲ್ಲಿ 132 ಪುರುಷರು, 43 ಮಹಿಳೆಯರು ಸೇರಿದಂತೆ 175 ಮತದಾರರಿದ್ದಾರೆ. ಕೊಳ್ಳೇ ಗಾಲ ತಾಲೂಕಿನಲ್ಲಿ 342 ಪುರುಷರು, 189 ಮಹಿಳೆಯರು ಸೇರಿದಂತೆ 531 ಮತದಾರರಿದ್ದಾರೆ. ಹನೂರು ತಾಲೂಕಿ ನಲ್ಲಿ 154 ಪುರುಷರು, 23 ಮಹಿಳೆಯರು ಸೇರಿದಂತೆ 177 ಮತದಾರರಿದ್ದಾರೆ ಎಂದು ತಿಳಿಸಿದರು.

ಮತದಾನವು ಜೂ. 8ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆ ಯಲಿದೆ. ಮತ ಎಣ ಕೆ ಕಾರ್ಯವು ಜೂ. 12ರಂದು ನಡೆಯಲಿದೆ. ಚುನಾವಣೆ ಪ್ರಕ್ರಿಯೆಯು ಜೂ. 15ರಂದು ಮುಕ್ತಾಯ ವಾಗಲಿದೆ ಎಂದರು. ಈಗಾಗಲೇ ಪೂರ್ಣ ಗೊಂಡಿರುವ ವಿಧಾನಸಭಾ ಚುನಾವಣೆಗೂ ರಾಜಕೀಯ ಪಕ್ಷಗಳು ಜಿಲ್ಲೆಯಲ್ಲಿ ಸಹಕಾರ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಪಾರ ದರ್ಶಕ, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಸಂಪೂರ್ಣ ಸಹಕಾರ ನೀಡಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಬ್ಯಾಡಮೂಡ್ಲು ಬಸವಣ್ಣ, ಮಾದೇಶು, ಎ.ಎಸ್. ಕೃಷ್ಣ, ಶಿವಸ್ವಾಮಿ, ಮುನ್ನಾ ಹಾಜರಿದ್ದರು.

Translate »