ಮೈಸೂರು ಜಿಲ್ಲಾದ್ಯಂತ ಮತದಾರರ ಮಿಂಚಿನ ನೋಂದಣಿ ಆರಂಭ
ಮೈಸೂರು

ಮೈಸೂರು ಜಿಲ್ಲಾದ್ಯಂತ ಮತದಾರರ ಮಿಂಚಿನ ನೋಂದಣಿ ಆರಂಭ

February 24, 2019

ಮೈಸೂರು: ಯುವ ಮತದಾರರನ್ನು ಸೆಳೆಯಲು ಜಿಲ್ಲಾಡಳಿತವು ಮೈಸೂರು ನಗರ ಮತ್ತು ಜಿಲ್ಲೆಯಾದ್ಯಂತ ಮಿಂಚಿನ ನೋಂದಣಿ ಕಾರ್ಯವನ್ನು ಆರಂಭಿಸಿದೆ. 18 ವರ್ಷ ಪೂರೈಸಿದ ಪ್ರತಿಯೊಬ್ಬ ಯುವಕ-ಯುವತಿಯರನ್ನು ಮತದಾರರ ಪಟ್ಟಿಗೆ ಸೇರಿಸಲು ಭಾರತ ಚುನಾವಣಾ ಆಯೋಗವು ಇಂದು (ಫೆ.23) ಮತ್ತು ನಾಳೆ (ಫೆ.24) ವಿಶೇಷ ಮತದಾರರ ನೋಂದಣಿ ಅಭಿಯಾನ ಏರ್ಪಡಿಸಿದೆ.

ಪ್ರತೀ ಮಟ್ಟಗಳಲ್ಲಿ ಇಬ್ಬಿಬ್ಬರು ಬೂತ್ ಮಟ್ಟದ ಅಧಿಕಾರಿ ಗಳನ್ನು ನಿಯೋಜಿಸಲಾಗಿದ್ದು, ಅಲ್ಲಿಗೆ ಬರುವ ಪ್ರತಿಯೊಬ್ಬ ರಿಂದ ಅಗತ್ಯ ದಾಖಲಾತಿ ಪಡೆದುಕೊಂಡು ನಿಯಮಾನು ಸಾರ ಕ್ರಮ ವಹಿಸಲಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸುವುದಕ್ಕೆ ಸಂಬಂಧಪಟ್ಟ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿಸಿಕೊಂಡು ಯುವ ಮತದಾರ ರನ್ನು ನೋಂದಾಯಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಮಿಂಚಿನ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ.

ಇದೇ ಪ್ರಥಮ ಬಾರಿಗೆ ಭಾರತ ಚುನಾವಣಾ ಆಯೋ ಗವು ‘ಸಿ-ವಿಜಲ್’ ಎಂಬ ಆ್ಯಪ್ ಅನ್ನು ಡೌನ್‍ಲೋಡ್ ಮಾಡಿಕೊಂಡು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಯಂತಹ ಪ್ರಸಂಗ ಕಂಡು ಬಂದಲ್ಲಿ ಫೋಟೋ ಅಥವಾ ವಿಡಿಯೋಗಳನ್ನು ಆ್ಯಪ್‍ಗೆ ಅಪ್‍ಲೋಡ್ ಮಾಡಿದಲ್ಲಿ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಕ್ರಮ ವಹಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ನಾಳೆ (ಫೆ.24) ಸಂಜೆ 5.30 ಗಂಟೆವರೆಗೂ ಮಿಂಚಿನ ನೋಂದಣಿ ಕಾರ್ಯ ನಡೆಯಲಿದ್ದು, ಯುವ ಮತದಾರರು ಈ ಸೌಲಭ್ಯವನ್ನು ಬಳಸಿಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ ಕೊಳ್ಳಬೇಕೆಂದು ಡಿಸಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ. ಮಾರ್ಚ್ 1 ಮತ್ತು 2 ರಂದು ಮತ್ತೆ ವಿಶೇಷ ಮತದಾರರ ನೋಂದಣಿ ಕಾರ್ಯವನ್ನು ನಡೆಸಲಿದೆ ಎಂದು ತಿಳಿಸಿದ್ದಾರೆ.

Translate »