ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಮೈಸೂರು

ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

June 28, 2019

ಮೈಸೂರು, ಜೂ.27- ಎನ್.ಆರ್ ಮೊಹಲ್ಲಾ ವಿಭಾಗ ವಿದ್ಯುತ್ ವಿತರಣಾ ಕೇಂದ್ರದ ವತಿಯಿಂದ ಜೂ.28ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ 66/11 ಕೆವಿ ದೊಡ್ಡ ಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರಗಳಿಂದ 3ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕೆಲಸದ ನಿಮಿತ್ತ ವಿದ್ಯುತ್ ಸರಬರಾಜು ವ್ಯತ್ಯಯವಾಗುವುದು. ಈ ಸಂಬಂಧ ರಾಮಾನುಜ ರಸ್ತೆ, ಹೊಸ ಬಂಡಿಕೇರಿ, ಜೆಎಸ್‍ಎಸ್‍ಆಸ್ಪತ್ರೆ, ಅಗ್ರಹಾರ, ಬಸವೇಶ್ವರ ರಸ್ತೆ, ಚಾಮುಂಡಿಪುರಂನ ಹಲವು ಭಾಗಗಳು, ಸಬರ್ಬ್ ಬಸ್ ನಿಲ್ದಾಣ, ನಜರ್‍ಬಾದ್, ಇಟ್ಟಿಗೆಗೂಡು, ಮೃಗಾಲಯದ ಸುತ್ತಮುತ್ತ, ಸರ್ಕಾರಿ ಅತಿಥಿಗೃಹ ಸುತ್ತಮುತ್ತ, ತಾಲೂಕು ಕಚೇರಿ, ಡಿ.ದೇವರಾಜ ಅರಸು ರಸ್ತೆ, ಬಿ.ಎನ್. ರಸ್ತೆ, ಚಾಮುಂಡಿ ಬೆಟ್ಟ, ಸಿದ್ದಾರ್ಥನಗರ, ಆಲನಹಳ್ಳಿ ಸುತ್ತಮುತ್ತಲ ಪ್ರದೇಶಗಳು, ಗಿರಿದರ್ಶಿನಿ ಬಡಾವಣೆ, ಅರಮನೆ ಸುತ್ತಮುತ್ತಲ ಪ್ರದೇಶಗಳು, ಶ್ರೀ ಹರ್ಷ ರಸ್ತೆ, ಸಯ್ಯಾಜಿರಾವ್ ರಸ್ತೆ, ಇರ್ವಿನ್ ರಸ್ತೆ ಸುತ್ತಮುತ್ತ, ಧನ್ವಂತರಿ ರಸ್ತೆ, ಶಿವರಾಂಪೇಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »