ವಿದ್ಯುತ್ ಕಣ್ಣಾಮುಚ್ಚಾಲೆ ರೈತರು, ಸಾರ್ವಜನಿಕರು ಹೈರಾಣಚೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ
ಮೈಸೂರು

ವಿದ್ಯುತ್ ಕಣ್ಣಾಮುಚ್ಚಾಲೆ ರೈತರು, ಸಾರ್ವಜನಿಕರು ಹೈರಾಣಚೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ

April 29, 2019

ಹೆಚ್.ಡಿ.ಕೋಟೆ: ತಾಲೂಕಿನಾದ್ಯಂತ ವಿದ್ಯುತ್ ಕಣ್ಣಾಮುಚ್ಚಾಲೆ ಯಿಂದ ರೈತರು ಸೇರಿದಂತೆ ಸಾರ್ವ ಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

ತಾಲೂಕಿನಲ್ಲಿ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಲ್ಲಿ ಚೆಸ್ಕಾಂ ವಿಫಲ ವಾಗಿದ್ದು, ಈ ಬಗ್ಗೆ ಅಧಿಕಾರಿಗಳು ಬೇಜ ವಾಬ್ದಾರಿತನ ಪ್ರದರ್ಶಿಸುತ್ತಿದ್ದಾರೆ ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ತಾಲೂಕಿ ನಾದ್ಯಂತ ಕುಡಿಯುವ ನೀರಿನ ಸಮಸ್ಯೆ ದಿನೇದಿನೆ ಹೆಚ್ಚುತ್ತಿದೆ. ತಾಲೂಕಿನಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗುತ್ತಿರುವ ಬಗ್ಗೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಪ್ರಶ್ನಿಸಿದರೆ ಹಾರಿಕೆ ಉತ್ತರ ನೀಡುತ್ತಾರೆ. ಸಮರ್ಪಕ ವಿದ್ಯುತ್ ಸರಬರಾಜು ಮಾಡು ವಲ್ಲಿ ಚೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದಾರೆ. ಪುರಸಭಾ ಸದಸ್ಯ ಹರೀಶ್ ನೇರ ಆರೋಪ ಮಾಡಿದ್ದಾರೆ.

ವಿದ್ಯುತ್ ಸಮಸ್ಯೆ ಕುರಿತು ಶಾಸಕ ಅನಿಲ್ ಚಿಕ್ಕಮಾದು ಅವರ ಗಮನಕ್ಕೆ ಹಲವು ಬಾರಿ ತಂದರೂ ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ. ಸಂಕಷ್ಟದಲ್ಲಿ ಸಿಲುಕಿರುವ ರೈತರ ಸಮಸ್ಯೆ ಬಗೆಹರಿಸದಿದ್ದರೆ ಉಗ್ರವಾಗಿ ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪಟ್ಟಣದ ಚೆಸ್ಕಾಂ ಸಹಾಯಕ ಕಾರ್ಯ ಪಾಲಕ ಅಭಿಯಂತರ ಮಹೇಶ್ ಕುಮಾರ್ ಪ್ರತಿಕ್ರಿಯಿಸಿ, ತಾಲೂಕಿನಲ್ಲಿ ಪಂಪ್‍ಸೇಟ್‍ಗಳಿಗೆ ದಿನಕ್ಕೆ ಆರೂವರೆ ಗಂಟೆ ಕಾಲ ವಿದ್ಯುತ್ ಸರಬರಾಜನ್ನು ಸಂಪೂರ್ಣವಾಗಿ ಕೊಡುತ್ತಿದ್ದೇವೆ ಎಂದು ಭರವಸೆ ನೀಡಿದ್ದು, ಅಣ್ಣೂರು, ಪಡುಕೋಟೆ, ಹೈರಿಗೆ ಗ್ರಾಮಗಳಿಗೆ ವೋಲ್ಟೇಜ್ ಸಮಸ್ಯೆ ಇರುವ ಕಾರಣ ವಿದ್ಯುತ್ ಸರಬರಾಜು ಸ್ವಲ್ಪ ಮಟ್ಟಿಗೆ ಸಮಸ್ಯೆಯಾಗಿದೆ. ಸದ್ಯದಲ್ಲೇ ಸಮಸ್ಯ ಬಗೆಹರಿಸಲಿದ್ದೇವೆ. ರೈತರಿಗೆ ವಿದ್ಯುತ್ ಸರಬರಾಜು ಬಗ್ಗೆ ಹೆಚ್ಚಿನ ಜವಾಬ್ದಾರಿ ವಹಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

Translate »