ಹುಯಿಲಾಳು: ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಮನೆಗೆ ಬೆಂಕಿಬಿದ್ದು, ನಗದು, ಚಿನ್ನಾಭರಣ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿದ್ದು, ಅಪಾರ ನಷ್ಟ ಸಂಭವಿಸಿರುವ ಘಟನೆ ತಾಲೂಕಿನ ಇಲವಾಲ ಹೋಬಳಿಯ ಹುಯಿಲಾಳು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಣ್ಣಶೆಟ್ಟಿ ಅವರ ನಿವಾಸದಲ್ಲಿ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಭಯಭೀತರಾದ ಕುಟುಂಬಸ್ಥರು ಮನೆಯಿಂದ ಹೊರ ಬಂದಿದ್ದಾರೆ. ಅಷ್ಟರಲ್ಲಾಗಲೇ ಬೆಂಕಿ ಕೆನ್ನಾಲಿಗೆ ಮನೆಯನ್ನು ಸಂಪೂರ್ಣ ಆವರಿಸಿತ್ತು. ಕೂಡಲೇ ಅಗ್ನಿಶಾಮಕ ಠಾಣೆಗೆ ಸುದ್ದಿ ಮುಟ್ಟಿಸಲಾಯಿತು. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಸ್ಥಳೀಯರೊಂದಿಗೆ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬೆಂಕಿ ಅವಘÀಡದಿಂದ ಮನೆ ಸಂಪೂರ್ಣ ಭಸ್ಮವಾಗಿದ್ದು, 10 ಸಾವಿರ ನಗದು, 20 ಸಾವಿರ ಮೌಲ್ಯದ ಚಿನ್ನಾಭರಣ, ಗೃಹೋಪಯೋಗಿ ವಸ್ತುಗಳು, ದವಸ-ಧಾನ್ಯಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ. ಘಟನೆಯಿಂದ ಸಣ್ಣಶೆಟ್ಟಿ ಕುಟುಂಬ ಬೀದಿಗೆ ಬಿದ್ದಿದ್ದು, ಸೂಕ್ತ ಪರಿಹಾರಕ್ಕಾಗಿ ಮನವಿ ಮಾಡಿದೆ. ಗ್ರಾಪಂ ಮಾಜಿ ಸದಸ್ಯ ಹುಯಿಲಾಳು ರಾಮಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.