ಸಲಗ ಹತ್ಯೆ; ದಂತ ಅಪಹರಣ
ಚಾಮರಾಜನಗರ

ಸಲಗ ಹತ್ಯೆ; ದಂತ ಅಪಹರಣ

February 7, 2019

ಹನೂರು: ಕಾವೇರಿ ವನ್ಯಧಾಮದ ಕೊತ್ತನೂರು ಅರಣ್ಯ ಪ್ರದೇಶದಲ್ಲಿ ಒಂಟಿ ಸಲಗವೊಂದನ್ನು ನಾಡ ಬಂದೂಕಿನಿಂದ ಹತ್ಯೆ ಮಾಡಿ ದಂತ ಕಳವು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಘಟನೆ ವಿವರ : ರಾಜ್ಯದ ಪ್ರಸಿದ್ದ ಚಿಕ್ಕಲ್ಲೂರು ಜಾತ್ರೆಯ ಸಂದರ್ಭದಲ್ಲಿ ಸುಮಾರು 50 ವರ್ಷದ ಗಂಡಾನೆಯೊಂದನ್ನು ಬೇಟೆಗಾರರು ಹಣೆಗೆ ಗುಂಡಿಕ್ಕಿ ಹತ್ಯೆ ಮಾಡಿ, ಆಸ್ಯಿಡ್ ಬಳಸಿ ಆನೆಯ ದಂತಗಳನ್ನು ಅಪಹರಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕಳೆದ ಭಾನುವಾರ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಆನೆಯ ಕಳೆಬರಹ ಪತ್ತೆಯಾಗಿದ್ದು, ಮಾಹಿತಿಯನ್ನು ಹಿರಿಯ ಅಧಿಕಾರಿಗಳಿಗೆ ತಿಳಿಸಿದಾಗ ಸೋಮವಾರ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಢಿದ್ದಾರೆ.

ಸ್ಥಳಕ್ಕೆ ಅಂಕರಾಜು ಎ.ಸಿ.ಎಫ್, ವಲಯ ಅರಣ್ಯಾಧಿಕಾರಿ ರಾಜಶೇಖರಪ್ಪ, ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Translate »