ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು
ಮೈಸೂರು

ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು

March 22, 2021

ಮೈಸೂರು, ಮಾ.21(ಆರ್‍ಕೆಬಿ)- ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಹೆಚ್ಚು ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಒತ್ತು ನೀಡ ಲಾಗುವುದು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿ ಕಾರದ ಅಧ್ಯಕ್ಷ ಹೇಮಂತ್‍ಕುಮಾರ್‍ಗೌಡ ತಿಳಿಸಿದರು.
ವಿಶ್ವ ಅರಣ್ಯ ದಿನಾಚರಣೆ ಅಂಗವಾಗಿ ಭಾನುವಾರ ಮೈಸೂರಿನ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರದ ವತಿಯಿಂದ ವಿವಿಧ ಜಾತಿಯ ಸಸಿಗಳನ್ನು ನೆಡುವ ಮೂಲಕ `ಅರಣ್ಯ ಅರಿವು’ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಕೃತಿಯಲ್ಲಿ ರುವ ಎಲ್ಲವೂ ತನಗೊಬ್ಬನಿಗೆ ಇವೆ ಎಂಬಂತಹ ಮಾನವನ ಧೋರಣೆಯಿಂದಾಗಿ ಅನೇಕ ಪ್ರಾಕೃತಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಪರಿಸರ ರಕ್ಷಣೆಯಾದರೆ ನಾವು ಉಳಿ ದಂತೆ ಎಂಬ ಭಾವನೆ ಎಲ್ಲರಲ್ಲೂ ಮೂಡಬೇಕು ಎಂದರು.

ಅರಣ್ಯಕ್ಕೆ ಬೆಂಕಿ ಬೀಳದಂತೆ ಎಚ್ಚರಿಕೆ ವಹಿಸುವುದು ಅಗತ್ಯ. ಅರಣ್ಯಕ್ಕೆ ಬೆಂಕಿ ಬಿದ್ದರೆ ಪ್ರಾಣಿ-ಪಕ್ಷಿ ಸಂಕುಲ ನಾಶ ವಾಗುತ್ತದೆ. ಹೀಗಾಗಿ ಅರಣ್ಯ ನಾಶದಿಂದ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳು ಮತ್ತು ಅರಣ್ಯ ಸಂರಕ್ಷಣೆ ಯಲ್ಲಿ ನಮ್ಮ ಪಾತ್ರ ಏನೆಂಬುದನ್ನು ಎಲ್ಲರೂ ಅರಿತುಕೊಳ್ಳ ಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು, ಯುವ ಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅರಣ್ಯ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿರುವುದರಿಂದ ಅದನ್ನು ಸಮರ್ಥವಾಗಿ ನಿರ್ವಹಿಸಿದರೆ ಅರಣ್ಯ ಕಾಪಾಡಿಕೊಳ್ಳುವ ಜೊತೆಗೆ ಪರಿಸರಕ್ಕೂ ಹೆಚ್ಚಿನ ಕೊಡುಗೆ ನೀಡಿ ದಂತಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯೆ ಛಾಯಾ ದೇವಿ, ಬಿಜೆಪಿ ವ್ಯಾಪಾರಿ ಪ್ರಕೋಷ್ಠದ ಸಂಚಾಲಕ ಆರ್.ಪರಮೇಶಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ತೋಟಗಾರಿಕೆ ಉಸ್ತುವಾರಿ ಸುಬ್ರಹ್ಮಣ್ಯಸ್ವಾಮಿ, ಬಿಜೆಪಿ ಯುವ ಮುಖಂಡರಾದ ಮಂಜು ಸಿ.ಗೌಡ, ನವೀನ್, ಎಸ್.ಎನ್.ರಾಜೇಶ್, ಶ್ರೀನಿವಾಸ್, ಮರಿಸ್ವಾಮಿ, ಸುನೀಲ್, ಸುಬ್ರಹ್ಮಣ್ಯ ಇನ್ನಿತರರು ಉಪಸ್ಥಿತರಿದ್ದರು.

Translate »