ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು

ಗುಂಡ್ಲುಪೇಟೆ: ಕ್ಷೇತ್ರದಲ್ಲಿನ ಗ್ರಾಮೀಣ ಪ್ರದೇಶದ ರಸ್ತೆಗಳು ಇನ್ನೂ ಸಹ ದುಸ್ಥಿತಿಯಲ್ಲಿದ್ದು, ಹಂತ ಹಂತವಾಗಿ ಕ್ರಿಯಾ ಯೋಜನೆ ತಯಾರಿಸಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಹೇಳಿದರು.

ತಾಲೂಕಿನ ವಿವಿಧ ಗ್ರಾಮಗಳ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಬಡಾವಣೆ ಗಳಲ್ಲಿನ ಕಾಂಕ್ರಿಟ್ ರಸ್ತೆ ಕಾಮಗಾರಿ ಹಾಗೂ ಬಾಚಹಳ್ಳಿ, ಬಂಡೀಪುರ, ಬಾಚ ಹಳ್ಳಿ ಹುಲ್ಲಾಪುರ-ಕಡಬೂರು ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲೂಕಿನ ತೊರವಳ್ಳಿ ಗ್ರಾಮದಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ, ಭೀಮನಬೀಡು ಗ್ರಾಮದಲ್ಲಿ 75 ಲಕ್ಷ ರೂ. ವೆಚ್ಚ ರಸ್ತೆ ಮತ್ತು ಚರಂಡಿ ನಿರ್ಮಾಣ, ಕೆಬ್ಬೇಪುರ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ, ಬಾಚ ಹಳ್ಳಿ ಗ್ರಾಮದಿಂದ ಬಂಡೀಪುರ ರಸ್ತೆ 90 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ, ಬಾಚಹಳ್ಳಿ ಯಿಂದ ಕಡಬೂರು ಮಾರ್ಗ ರಸ್ತೆಯನ್ನು 1.20 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದರು.

ಗ್ರಾಮಾಂತರ ಪ್ರದೇಶದಲ್ಲಿ ಅಭಿವೃದ್ಧಿ ಯಾಗಿಲ್ಲದ ಮತ್ತು ವಾಹನ, ಸಾರ್ವಜನಿಕ ಸಂಚಾರಕ್ಕೆ ಯೋಗ್ಯವಲ್ಲ ರಸ್ತೆಗಳ ಮಾಹಿತಿ ಪಡೆದುಕೊಂಡಿದ್ದು, ಶೀಘ್ರದಲ್ಲೇ ಹಂತ ಹಂತವಾಗಿ ಅಭಿವೃದ್ಧಿಗೆ ಚಾಲನೆ ನೀಡಲಾಗು ವುದು ಎಂದು ಶಾಸಕರು ತಿಳಿಸಿದರು.
ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಸರ್ಕಾರಕ್ಕೆ ಒತ್ತಡ ತಂದಿದ್ದೇನೆ. ಈಗ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಬರಗಿ ರಸ್ತೆ, ಬಾಚಹಳ್ಳಿ ರಸ್ತೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಕ್ರಿಟ್ ರಸ್ತೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸುತ್ತಿದ್ದು, ಮುಂದಿನ ದಿನ ಗಳಲ್ಲಿ ಕ್ಷೇತ್ರದ ಅಭಿವೃದ್ದಿಗೆ ಮತ್ತಷ್ಟು ಶ್ರಮಿಸ ಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ರತ್ನಮ್ಮ ಶ್ರೀಕಂಠಪ್ಪ, ಬಾಬು, ಗ್ರಾಪಂ ಅಧ್ಯಕ್ಷ ಮಹ ದೇವಶೆಟ್ಟಿ, ಗಂಗಾಧರ್, ಆಲತ್ತೂರು ರಾಜೇಶ್, ರಾಜಶೇಖರಪ್ಪ, ರಘು, ಬಂಗಾರು, ಚನ್ನಮಲ್ಲಿಪುರ ಬಸವಣ್ಣ, ಪುರಸಭೆ ಸದಸ್ಯ ಎಸ್.ಗೋವಿಂದರಾಜನ್, ವೀರಪ್ಪ, ನಂಜುಂಡಸ್ವಾಮಿ, ಗ್ರಾಪಂ ಅಧ್ಯಕ್ಷ ಮುದ್ದಪ್ಪ, ಗಂಗಮ್ಮ, ರಾಜಪ್ಪ ಸೇರಿದಂತೆ ಹಲವರು ಇದ್ದರು.