ವಿದ್ಯಾವಂತ ಅಂಗವಿಕಲರಿಗೆ ಜಿಲ್ಲಾ ಮಟ್ಟದಲ್ಲೇ ಉದ್ಯೋಗ ಕಲ್ಪಿಸಿ
ಮೈಸೂರು

ವಿದ್ಯಾವಂತ ಅಂಗವಿಕಲರಿಗೆ ಜಿಲ್ಲಾ ಮಟ್ಟದಲ್ಲೇ ಉದ್ಯೋಗ ಕಲ್ಪಿಸಿ

August 1, 2018

ಬೆಂಗಳೂರು: ಮಾನವೀಯತೆ ದೃಷ್ಟಿಯಿಂದ ವಿದ್ಯಾ ವಂತ ಅಂಗವಿಕಲರಿಗೆ ಜಿಲ್ಲಾ ಮಟ್ಟದಲ್ಲಿ ಉದ್ಯೋಗ ದೊರಕಿಸಿ ಕೊಡುವ ಪ್ರಯತ್ನ ಮಾಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಿಗೆ ಸೂಚಿಸಿದರು.

ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಇಂದು ಮುಂದುವರೆದ ಸಭೆಯಲ್ಲಿ ಮಾತನಾಡಿದ ಅವರು, ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಸ್ವೀಕರಿಸುವ ದೂರುಗಳನ್ನು ಜಿಲ್ಲಾಧಿಕಾರಿಗಳಿಗೆ ರವಾನಿ ಸಿದ ಸಂದರ್ಭದಲ್ಲಿ ಹಿಂಬರಹ ನೀಡಿದರೆ ಮಾತ್ರ ಪ್ರಕರಣ ಮುಕ್ತಾಯವಾಗಿದೆ ಎಂದು ಪರಿಗಣಿಸಲಾಗುವುದು. ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಿ ಎಂದ ಮುಖ್ಯಮಂತ್ರಿಗಳು, ಮತ್ತೊಬ್ಬ ಅಧಿಕಾರಿಗೆ ಅರ್ಜಿಯನ್ನು ವರ್ಗಾಯಿಸಿ ವಿಳಂಬ ಮಾಡುವುದು ಸರಿಯಲ್ಲ. ಜನತಾದರ್ಶನದ ಅರ್ಜಿಗಳನ್ನು ನಿರ್ಲಕ್ಷ್ಯ ಮಾಡಬೇಡಿ ಎಂದು ಸೂಚಿಸಿದರು. ತಿಂಗಳಿ ಗೊಮ್ಮೆ ಜನಸ್ಪಂದನಾ ಕಾರ್ಯಕ್ರಮ ಏರ್ಪ ಡಿಸುವಂತೆ ತಿಳಿಸಿದರು.

ಅಲ್ಪಸಂಖ್ಯಾತರ ಇಲಾಖೆಯ ಮುಖ್ಯ ಮಂತ್ರಿಗಳ ಅಭಿವೃದ್ಧಿ ಯೋಜನೆಯಡಿಯಲ್ಲಿ (ಅಲ್ಪಸಂಖ್ಯಾತರ
ಕಾಲೊನಿ ಅಭಿವೃದ್ಧಿ) ಕಲಬುರಗಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಕಡಿಮೆ ಸಾಧನೆ ಯಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಕೇಳಿದಾಗ, ಅನುಷ್ಠಾನ ಮಾಡುವ ಅಧಿಕಾರಿಗಳ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಿದ್ದಲ್ಲಿ ಪ್ರಗತಿ ಸಾಧಿಸಬಹುದೆಂದು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು. ಖಾಲಿ ಇರುವ ಪ್ರಮುಖ ಹುದ್ದೆಗಳ ಹಾಗೂ ಇನ್ನಿತರ ಮಾಹಿತಿಯ ಪಟ್ಟಿಯನ್ನು ಮುಖ್ಯಕಾರ್ಯ ದರ್ಶಿಗಳಿಗೆ ಇ-ಮೇಲ್ ಮುಖಾಂತರ ಎರಡು ದಿನಗಳೊಳಗೆ ಕಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯಡಿ ವಿದ್ಯಾರ್ಥಿ ನಿಲಯ ಮುಂತಾದ ಕಟ್ಟಡಗಳನ್ನು ಕಟ್ಟಲು ತೋರುವ ಆಸಕ್ತಿ ನಿರ್ವಹಣೆಗೂ ತೋರಬೇಕು. ವಿದ್ಯಾರ್ಥಿಗಳಿಗೆ ಪೂರೈಸುವ ಎಲ್ಲ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿರಬೇಕು.

ವಿದ್ಯಾರ್ಥಿ ನಿಲಯಗಳಲ್ಲಿ ಅಡುಗೆಯನ್ನು ಶುಚಿಯಾಗಿ ತಯಾರಿಸುವಂತೆ ನಿಗಾವಹಿಸಿ, ಶೌಚಾಲಯಗಳ ಸ್ವಚ್ಛತೆಯನ್ನು ಕಾಪಾಡಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತಿಂಗಳಿಗೊಮ್ಮೆಯಾದರೂ ವಿದ್ಯಾರ್ಥಿನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡುವಂತೆ ತಿಳಿಸಿದ ಅವರು, ಸಮರ್ಪಕವಾಗಿ ಕಾರ್ಯನಿರ್ವಹಿಸದ ವಾರ್ಡನ್‍ಗಳನ್ನು ಅಮಾನತು ಗೊಳಿಸಿ ಹಾಗೂ ಸಿಬ್ಬಂದಿ ನೇಮಕಕ್ಕೆ ಪ್ರಥಮ ಆದ್ಯತೆ ನೀಡುವಂತೆ ಸೂಚಿಸಿದರು. ವಿದ್ಯಾರ್ಥಿ ನಿಲಯಗಳಿಗೆ ವಾರ್ಡನ್‍ಗಳನ್ನು ನೇಮಕ ಮಾಡುವ ಪ್ರಕ್ರಿಯೆಗಳಲ್ಲಿ ಆ ಕೆಲಸದ ಬಗ್ಗೆ ಇರುವ ಆಸಕ್ತಿಯನ್ನೂ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

Translate »