ಹಳ್ಳಿಗೆ ಬಂದ ವಲಸೆ ಕಾರ್ಮಿಕರಿಗೆ ಉದ್ಯೋಗ ಖಾತರಿ
ಮೈಸೂರು

ಹಳ್ಳಿಗೆ ಬಂದ ವಲಸೆ ಕಾರ್ಮಿಕರಿಗೆ ಉದ್ಯೋಗ ಖಾತರಿ

May 21, 2020

ಬೆಂಗಳೂರು, ಮೇ 20-ಕೋವಿಡ್-19ರ ಹಿನ್ನೆಲೆ ಯಲ್ಲಿ ಲಾಕ್‍ಡೌನ್ ಕಾರಣಕ್ಕೆ ವಲಸಿಗ ಕಾರ್ಮಿಕರು ಬಹಳ ಸಂಖ್ಯೆಯಲ್ಲಿ ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದು, ಅವರಿಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. 2020-21ನೇ ಸಾಲಿನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ 13 ಕೋಟಿ ಮಾನವ ದಿನಗಳ ಸೃಜನೆಯ ಗುರಿ ಹಾಗೂ 6315.79 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಇದಲ್ಲದೆ ಕೇಂದ್ರ ಸರ್ಕಾರವೂ ಉದ್ಯೋಗ ಖಾತರಿ ಯೋಜನೆಗೆ 40 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರಿಗೆ ಉದ್ಯೋಗ ದೊರೆಯುವಂತೆ ಹಾಗೂ ನಿಗದಿತ ಅವಧಿಯಲ್ಲಿ ವೇತನ ಪಾವತಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕೋವಿಡ್-19 ನಿರ್ವ ಹಣೆಗೆ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಟಾಸ್ಕ್ ಫೆÇೀರ್ಸ್ ರಚಿಸಿ, ಜನ ಜಾಗೃತಿ ಮೂಡಿಸುವುದು ಲಾಕ್‍ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳ ಮನೆ ಬಾಗಿಲಿಗೆ ವಿತ ರಣೆ, ಸೌಲಭ್ಯಗಳ ವಿತರಣೆ, ಮನೆ ಮನೆ ಭೇಟಿ ನೀಡಿ ಹೋಮ್ ಕ್ವಾರಂಟೈನ್ ಪರಿಶೀಲನೆ, ದೈನಂದಿನ ಮಾಹಿತಿ ಸಂಗ್ರಹ, ಸಾಂಸ್ಥಿಕ ಕ್ವಾರಂಟೈನ್ ನಿರ್ವಹಣೆ ಮೇಲ್ವಿಚಾರಣೆ ವಹಿಸುತ್ತಿದೆ. ಇದಲ್ಲದೆ, ಸ್ವಸಹಾಯ ಸಂಘಗಳು 8 ಲಕ್ಷ ಮಾಸ್ಕ್ ತಯಾರಿಸಿ ವಿತರಿಸುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರಲ್ಲಿ ಆತ್ಮವಿಶ್ವಾಸ ಮೂಡಿಸಲು ಸಾಧ್ಯವಾಗಿರುವ ಕುರಿತು ಮುಖ್ಯಮಂತ್ರಿ ಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮೀಣ ಪ್ರದೇಶ ದಲ್ಲಿ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸುವಂತೆ ನಿರ್ದೇ ಶನ ನೀಡಿದರು. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಇರುವ 14 ಜಿಲ್ಲೆಗಳಲ್ಲಿ 659 ಗ್ರಾಮಗಳಲ್ಲಿ 389 ಟ್ಯಾಂಕರ್ ಮತ್ತು 706 ಖಾಸಗಿ ಬೋರ್‍ವೆಲ್‍ಗಳಿಂದ ನೀರು ಪೂರೈಕೆ ಆಗುತ್ತಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ, ರಾಜ್ಯ ಸರ್ಕಾರದ ಜಲಧಾರೆ ಯೋಜನೆ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಕುರಿತು ಚರ್ಚಿಸಲಾಯಿತು.

15 ಲಕ್ಷ ಮನೆಗೆ ನಲ್ಲಿ ಸಂಪರ್ಕ ಗುರಿ

ಬೆಂಗಳೂರು, ಮೇ 20- ಭಾರತ ಸರ್ಕಾ ರದ ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವ ರೊಂದಿಗೆ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

ಜಲ ಜೀವನ್ ಮಿಷನ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ತಲಾ ಶೇ.50ರ ಅನುದಾನ ದೊಂದಿಗೆ ಜಾರಿಗೊಳಿ ಸಲಾಗುತ್ತಿದ್ದು, ರಾಜ್ಯಕ್ಕೆ 1150 ಕೋಟಿ ರೂ. ಅನುದಾನ ಮಂಜೂರಾಗಿದೆ. ರಾಜ್ಯದಲ್ಲಿ 15 ಲಕ್ಷ ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಜೋಡಿಸುವ ಗುರಿ ನಿಗದಿಪಡಿಸಲಾಗಿದ್ದು, ಮುಂದಿನ 3 ವರ್ಷದಲ್ಲಿ ಈ ಗುರಿ ಸಾಧಿಸ ಲಾಗುವುದು ಎಂದು ಮುಖ್ಯಮಂತ್ರಿಯವರು ಮಾಹಿತಿ ನೀಡಿದರು. ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಾತನಾಡಿ, ಜಲ ಶಕ್ತಿ ಮಿಷನ್ ಯೋಜನೆಗೆ ಅನು ದಾನದ ಕೊರತೆ ಇಲ್ಲ. ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಆಯೋ ಗದ ಅನುದಾನವನ್ನೂ ಸಂಯೋಜಿಸಿ, 2022-23ರೊಳಗೆ ರಾಜ್ಯದಾದ್ಯಂತ ಈ ಯೋಜನೆಯನ್ನು ಜಾರಿ ಗೊಳಿಸುವಂತೆ ಸಲಹೆ ನೀಡಿದರು. ಪ್ರಾರಂಭದಲ್ಲಿ ಈಗಾಗಲೇ ಜಲ ಮೂಲ ಲಭ್ಯವಿರುವ, ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಲಾಯಿತು. ಸಭೆಯಲ್ಲಿ ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ..ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಮೊದಲಾ ದವರು ಸಭೆಯಲ್ಲಿ ಭಾಗವಹಿಸಿದ್ದರು.

Translate »