ರಾಜ್ಯದ 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ತೆರೆ
ಮೈಸೂರು

ರಾಜ್ಯದ 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ತೆರೆ

April 5, 2019

ಬೆಂಗಳೂರು: ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯಗೊಂಡಿದ್ದು, ನಾಳೆ ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. ನಿನ್ನೆಯವರೆಗೆ ಎರಡನೇ ಹಂತದ ಕ್ಷೇತ್ರಗಳಲ್ಲಿ 172 ಅಭ್ಯರ್ಥಿಗಳು, 249 ನಾಮಪತ್ರ ಗಳನ್ನು ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಕಡೆ ದಿನ ವಾದ ಇಂದು ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿ ಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಉಮೇದು ವಾರಿಕೆ ಸಲ್ಲಿಸಿದ್ದಾರೆ. ನಾಳೆ ಆಯಾ ಲೋಕಸಭಾ ಕ್ಷೇತ್ರ ಗಳಲ್ಲಿ ಚುನಾವಣಾಧಿಕಾರಿಗಳು ನಾಮಪತ್ರಗಳ ಪರಿಶೀ ಲನೆ ನಡೆಸಿ ಸಂಜೆ ವೇಳೆಗೆ ಕ್ರಮಬದ್ಧವಾದ ನಾಮಪತ್ರ ಗಳು ಹಾಗೂ ತಿರಸ್ಕøತ ನಾಮಪತ್ರಗಳ ಪಟ್ಟಿಯನ್ನು ಪ್ರಕಟಿಸಲಿದ್ದಾರೆ. ಹೀಗಾಗಿ ಎರಡೂ ಹಂತದ ಚುನಾ ವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ರಾಜ್ಯದಲ್ಲಿ ತೆರೆ ಬಿದ್ದಿದ್ದು, ಪ್ರಚಾರದ ಅಬ್ಬರ ಜೋರಾಗಲಿದೆ. ಏ.23 ರಂದು ಮತದಾನ ನಡೆಯುವ ಎರಡನೇ ಹಂತದ ಲೋಕ ಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲ ಕೋಟೆ, ಬೀದರ್, ಬಳ್ಳಾರಿ, ಕಲಬುರಗಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ರಾಯಚೂರು, ಕೊಪ್ಪಳ, ವಿಜಯಪುರ, ಹಾವೇರಿ ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ವಾಪಸ್ ಪಡೆ ಯಲು ಏ.8ರವರೆಗೂ ಕಾಲಾವಕಾಶವಿದೆ. ಮೊದಲ ಹಂತದಲ್ಲಿ ಏ.18ರಂದು ಮತದಾನ ನಡೆಯಲಿದ್ದು, ಎರಡೂ ಹಂತದ ಮತ ಎಣಿಕೆ ಮೇ 23ರಂದು ನಡೆದು, ಅಂದೇ ಫಲಿತಾಂಶ ಹೊರಬೀಳಲಿದೆ.

Translate »