ಅಪಾರ ಪ್ರಮಾಣದ ಮರ ಭಸ್ಮ
ಮಂಡ್ಯ

ಅಪಾರ ಪ್ರಮಾಣದ ಮರ ಭಸ್ಮ

October 27, 2020

ಕೆ.ಆರ್.ಪೇಟೆ,ಅ.26- ಪಟ್ಟಣದ ಹಳೇ ಕಿಕ್ಕೇರಿ ರಸ್ತೆಯ ಶ್ರೀ ಅನ್ನಪೂರ್ಣೇಶ್ವರಿ ಟಿಂಬರ್‍ನಲ್ಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ಉಂಟಾಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮರಮುಟ್ಟುಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಕರಕಲಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ.

ಕೆ.ಆರ್.ಪೇಟೆ ಪಟ್ಟಣದ ಹಳೇ ಕಿಕ್ಕೇರಿ ರಸ್ತೆಯಲ್ಲಿರುವ ಯುವಕ ಬಣ್ಣನಕೆರೆ ಗಂಗಾಧರ್ ಅವರಿಗೆ ಸೇರಿದ ಶ್ರೀ ಅನ್ನಪೂರ್ಣೇಶ್ವರಿ ಟಿಂಬರ್ ಮತ್ತು ವುಡ್ ಫ್ಲೈನಿಂಗ್ ವಕ್ರ್ಸ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ.ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದಾಗಿ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೆಂಕಿ ಹೊತ್ತಿಕೊಂಡು ಉರಿ ಯುತ್ತಿರುವ ಶಬ್ದ ಕೇಳಿದ ಟಿಂಬರ್ ಅಂಗಡಿಯ ಪಕ್ಕದ ಮನೆಯವರು ಮಾಲೀಕ ಗಂಗಾ ಧರ್ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಕೂಡಲೇ ಅಗ್ನಿಶಾಮಕ ಠಾಣೆಗೆ ಸುದ್ದಿ ಮುಟ್ಟಿಸಿ ಅಂಗಡಿಯ ಬಳಿ ಬಂದು ಬಾಗಿಲು ತೆಗೆದಾಗ ಬೆಂಕಿಯ ಕೆನ್ನಾಲಿಗೆಯು ಸಂಪೂರ್ಣ ವಾಗಿ ಆವರಿಸಿತ್ತು. ವಿಷÀಯ ತಿಳಿದ ಕೂಡಲೇ ದೌಡಾಯಿಸಿದ ಪಟ್ಟಣದ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಶ್ರೀನಿವಾಸರಾವ್ ಮತ್ತು ಸಿಬ್ಬಂದಿಗಳು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವ ಮೂಲಕ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ತಹಸೀಲ್ದಾರ್ ಎಂ.ಶಿವಮೂರ್ತಿ, ರಾಜಸ್ವ ನಿರೀಕ್ಷಕಿ ಚಂದ್ರಕಲಾ, ಗ್ರಾಮ ಲೆಕ್ಕಾಧಿಕಾರಿ ಹರೀಶ್, ಪುರಸಭಾ ಸದಸ್ಯರಾದ ಡಿ.ಪ್ರೇಮಕುಮಾರ್, ಹೆಚ್.ಆರ್. ಲೋಕೇಶ್ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ದೊರಕಿಸಿಕೊಡಲು ವರದಿ ಸಲ್ಲಿಸುವುದಾಗಿ ಭರವಸೆ ನೀಡಿದರು. ಪ್ರಕರಣ ಕುರಿತು ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ

Translate »