ಪರಿಸರ ರಕ್ಷಣೆ ಎಲ್ಲರ ಕರ್ತವ್ಯ
ಚಾಮರಾಜನಗರ

ಪರಿಸರ ರಕ್ಷಣೆ ಎಲ್ಲರ ಕರ್ತವ್ಯ

December 2, 2018

ಕೊಳ್ಳೇಗಾಲ: ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ವಾಗಿದೆ ಎಂದು ವನ್ಯಜೀವಿ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಟಿ.ಜಾನ್‍ಪೀಟರ್ ಹೇಳಿದರು.

ಪಟ್ಟಣದ ಸರ್ಕಾರಿ ಎಂಜಿಎಸ್‍ವಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಇಕೋ ಕ್ಲಬ್ ವತಿಯಿಂದ ‘ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ’ ಕುರಿತು ನಡೆದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು. ಎಂದ ಅವರು, ವನ್ಯಜೀವಿಗಳ ರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಬಿ.ಮಹದೇವ, ಇಕೋ ಕ್ಲಬ್ ಸಂಯೋಜಕ ಕೆ.ಪಿ.ಪ್ರಕಾಶ್, ಉಪನ್ಯಾಸಕರಾದ ಎಂ.ಮಹದೇವಪ್ರಸಾದ್, ಮಹ ದೇವಸ್ವಾಮಿ, ವೈ.ಬಿ.ಉಮಾ, ಅನುಪಮಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Translate »