ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ಇಂದು ಈಶ್ವರಪ್ಪ ರಾಜೀನಾಮೆ
ಮೈಸೂರು

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ಇಂದು ಈಶ್ವರಪ್ಪ ರಾಜೀನಾಮೆ

April 15, 2022

ಸ್ವತಃ ಸಚಿವ ಈಶ್ವರಪ್ಪನವರೇ ಶಿವಮೊಗ್ಗದಲ್ಲಿ ಘೋಷಣೆ
ಪಕ್ಷಕ್ಕೆ ಮುಜುಗರ ಆಗುವುದನ್ನು ತಪ್ಪಿಸಲು ಈ ನಿರ್ಧಾರ
ಇಂದು ಮುಖ್ಯಮಂತ್ರಿಗೆ ರಾಜೀನಾಮೆ ಸಲ್ಲಿಕೆಗೆ ತೀರ್ಮಾನ

ಶಿವಮೊಗ್ಗ, ಏ.೧೪-ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಗ್ರಾಮೀ ಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ನಾಳೆ (ಏ.೧೫) ಸಂಜೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ನಿನ್ನೆ ಮಧ್ಯಾಹ್ನ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಘೋಷಿಸಿದ ನಂತರ ಇನ್ನು ಮೂರು ದಿನ ಮಾಧ್ಯಮದವರೊಂದಿಗೆ ಮಾತನಾಡುವುದಿಲ್ಲ ಎಂದು ತಿಳಿಸಿದ್ದ ಸಚಿವ ಕೆ.ಎಸ್.ಈಶ್ವರಪ್ಪ, ಗುರುವಾರ ಸಂಜೆ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ, ರಾಜೀನಾಮೆ ಬಗ್ಗೆ ಪ್ರಕಟಿಸಿದರು.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ದೇನೂ ತಪ್ಪಿಲ್ಲ. ಆದರೆ, ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧ ರಿಸಿದ್ದೇನೆ. ನಾಳೆ ಸಂಜೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದರು.

ಪ್ರಧಾನಿಯಿಂದ ಸಂದೇಶ: ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀ ನಾಮೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸಂದೇಶ ರವಾನಿಸಿದ್ದರು ಎಂದು ಮೂಲಗಳು ತಿಳಿಸಿವೆ. ಈಶ್ವರಪ್ಪನವರು ಶೇ.೪೦ರಷ್ಟು ಕಮೀಷನ್ ಕೇಳುತ್ತಿರುವುದರಿಂದಲೇ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ವಾಟ್ಸಪ್ ಸಂದೇಶವನ್ನು ರವಾನಿಸಿದ್ದ ಹಿನ್ನೆಲೆಯಲ್ಲಿ ಈಶ್ವರಪ್ಪ ಮತ್ತು ಅವರ ಇಬ್ಬರು ಆಪ್ತರ ವಿರುದ್ಧ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ರಾಜ್ಯಾದ್ಯಂತ ಬೀದಿ ಗಿಳಿದು ಪ್ರತಿಭಟನೆ ನಡೆಸುತ್ತಿದೆ. ಮತ್ತೊಂದೆಡೆ ಗುತ್ತಿಗೆದಾರರ ಸಂಘವೂ ಕೂಡ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಈಶ್ವರಪ್ಪ ನವರೇ ಕಾರಣ ಎಂದು ಆರೋಪಿಸಿತ್ತು. ಇನ್ನು ಸಂತೋಷ್ ಪಾಟೀಲ್ ಕುಟುಂಬದವರು ಈಶ್ವರಪ್ಪನವರನ್ನು
ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ಸ್ವತಂತ್ರ ತೀರ್ಮಾನ ತೆಗೆದುಕೊಳ್ಳುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೊಂದಲ ಕ್ಕೊಳಗಾಗಿದ್ದರು. ಪ್ರಕರಣಕ್ಕೆ ಸಂಬAಧಪಟ್ಟAತೆ ಎಲ್ಲಾ ವಿವರಗಳನ್ನು ಪಕ್ಷದ ರಾಷ್ಟಾçಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ರವಾನಿಸಿ ಹೈಕಮಾಂಡ್‌ನ ಸಂದೇಶಕ್ಕಾಗಿ ಕಾಯುತ್ತಿದ್ದರು.

ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಕ್ಷದ ರಾಷ್ಟಿçÃಯ ಸಂಘ ಟನಾ ಕಾರ್ಯದರ್ಶಿ ಸಂತೋಷ್‌ಜೀ ಅವರ ಜೊತೆ ಚರ್ಚಿಸಿ, ಪ್ರಕರಣಕ್ಕೆ ಸಂಬAಧಿಸಿ ದಂತೆ ವಿವರಗಳನ್ನು ಕಲೆ ಹಾಕಲು ತಿಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಂತೊಷ್ ಅವರು ದೂರವಾಣ ಮೂಲಕ ಈಶ್ವರಪ್ಪ ಅವರ ಜೊತೆ ಮಾತುಕತೆ ನಡೆಸಿ ಕೆಲ ವಿವರಗಳನ್ನು ಪಡೆದಿದ್ದರು. ಅಂತಿಮವಾಗಿ ಈ ಪ್ರಕರಣದ ಬಗ್ಗೆ ನಿರ್ಧಾರ ಕೈಗೊಳ್ಳುವ ತೀರ್ಮಾನವನ್ನು ಪ್ರಧಾನಿ ಮೋದಿ ಅವರ ಅಂಗಳಕ್ಕೆ ರವಾನಿಸಲಾಗಿತ್ತು. ಎಲ್ಲಾ ಮೂಲಗಳಿಂದಲೂ ಮಾಹಿತಿ ತರಿಸಿಕೊಂಡ ಪ್ರಧಾನಿ ಮೋದಿಯವರು ನೀಡಿದ ಸೂಚನೆಯಂತೆ ಇಂದು ಸಂಜೆ ಬಿಜೆಪಿ ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ರವಾನಿಸಿದ ಸಂದೇಶದನುಸಾರ ಈಶ್ವರಪ್ಪ ಅವರು ತುರ್ತು ಸುದ್ದಿಗೋಷ್ಠಿ ನಡೆಸಿ, ರಾಜೀನಾಮೆ ಘೋಷಿಸಿದರು ಎಂದು ಮೂಲಗಳು ತಿಳಿಸಿವೆ.

Translate »