ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟ
ಮೈಸೂರು

ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟ

April 15, 2022

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು, ಸ್ವಪ್ರೇರಣೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂ ದಿಗೆ ಮಾತನಾಡುತ್ತಾ, ಕೆ.ಎಸ್.ಈಶ್ವರಪ್ಪ ಅವರು ನನ್ನ ಬಳಿ ಮಾತನಾಡಿದರು. ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಹಾಗೂ ತಪ್ಪಿಲ್ಲ ಎನ್ನುವ ಸಂಪೂರ್ಣ ವಿಶ್ವಾಸವಿದೆ. ಹೀಗಾಗಿ ನನಗೆ ನೈತಿಕತೆ ಇದೆ. ಈಗ ಅದನ್ನಿಟ್ಟುಕೊಂಡು ಮಾತ ನಾಡಿದರೆ ಬಹಳಷ್ಟು ಜನರಿಗೆ ಇರಿಸುಮುರುಸಾಗುತ್ತದೆ. ಅದಾಗು ವುದು ಬೇಡ. ಇದರ ತನಿಖೆ ಮುಗಿಸಿ, ಸತ್ಯ ಹೊರ ಬಂದು, ನನ್ನ ಮೇಲೆ ಇರುವ ಆರೋಪಗಳಿಂದ ವಿಮುಕ್ತನಾಗಿ ಹೊರ ಬರುತ್ತೇನೆ. ಅಲ್ಲಿವರೆಗೂ ನಾನು ಈ ಸ್ಥಾನದಲ್ಲಿರಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಆ ಪ್ರಕಾರ ಅವರು ಪತ್ರಿಕಾಗೋಷ್ಠಿಯಲ್ಲಿಯೂ ತಿಳಿಸಿ ದ್ದಾರೆ. ನಾಳೆ ಸಂಜೆ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದರು.

`ಮಹಾನಾಯಕನ’ ಕೈವಾಡ
ಬೆಳಗಾವಿ, ಏ.೧೪- ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲೂ `ಮಹಾನಾಯಕನ’ ಕೈವಾಡವಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಶಾಸಕಿ ಲಕ್ಷಿ÷್ಮ ಹೆಬ್ಬಾಳಕರ್ ವಿರುದ್ಧ ಆರೋಪಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಆರೋಪ ಮಾಡಿ, ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ ಅವರ ಕುಟುಂಬ ದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಈ ಪ್ರಕರಣದಲ್ಲಿ ಏನಾಗಿದೆ ಎನ್ನುವುದು ನನಗೆ ಸಂಪೂರ್ಣವಾಗಿ ಗೊತ್ತಿದೆ. ಈ ಪ್ರಕರಣದಲ್ಲಿ ರಾಜಕಾರಣ ಮಾಡಲಾಗುತ್ತಿದೆ. ನಿಜವಾದ ಸಂಗತಿಯನ್ನು ಶೀಘ್ರವೇ ಬಹಿರಂಗಪಡಿಸುತ್ತೇನೆ ಎಂದರು. ಸಿಡಿ ಪ್ರಕರಣದಲ್ಲಿ ನನ್ನ ವಿರುದ್ಧದ ಷಡ್ಯಂತ್ರದಲ್ಲಿ ಭಾಗಿ ಯಾದ ತಂಡವೇ ಈಗ ಈಶ್ವರಪ್ಪ ಅವರ ವಿರುದ್ಧವೂ ಕೆಲಸ ಮಾಡುತ್ತಿದೆ. ತನಿಖೆ ನಡೆಯಲಿ, ಈಶ್ವರಪ್ಪ ಅವರ ತಪ್ಪಿದ್ದರೆ ಬೇಕಾದ ಶಿಕ್ಷೆಯಾಗಲಿ. ಅಲ್ಲಿಯವರೆಗ ರಾಜೀನಾಮೆ ಕೊಡ ಬಾರದು. ಈ ಎರಡು ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದರು.

Translate »