ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ
ಮೈಸೂರು

ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ

December 30, 2020

ಬೆಂಗಳೂರು,ಡಿ.29(ಕೆಎಂಶಿ)-ರಾಜ್ಯಕ್ಕೆ ಹೆಚ್ಚು ವೈದ್ಯರು ಅಗತ್ಯವಿರುವುದರಿಂದ ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ಆರಂ ಭಿಸಬೇಕಾಗುತ್ತದೆ. ಇದಕ್ಕಾಗಿ ಖಾಸಗಿ ಸಹ ಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ನಿರ್ಮಿ ಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ವೈದ್ಯ ಕೀಯ ಮಹಾವಿದ್ಯಾಲಯ ಮತ್ತು ಸಂಶೋ ಧನಾ ಸಂಸ್ಥೆಯ ನೂತನ ಕಟ್ಟಡ ಉದ್ಘಾ ಟನೆಯಲ್ಲಿ ಮಾತನಾಡಿದ ಅವರು, ಒಂದು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ 600 -700 ಕೋಟಿ ರೂ. ಬೇಕಾಗುತ್ತದೆ. ಖಾಸಗಿ -ಸರ್ಕಾರಿ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿದರೆ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾ ಭ್ಯಾಸ, ಜನರಿಗೆ ಉಚಿತ ಆರೋಗ್ಯ ಸೌಲಭ್ಯ ನೀಡ ಬಹುದು. ಗುಜರಾತ್‍ನಲ್ಲಿ ಈ ರೀತಿ ಪ್ರಯತ್ನ ನಡೆಯುತ್ತಿದ್ದು, ನಮ್ಮಲ್ಲೂ ಈ ಬಗೆಯ ಪ್ರಯತ್ನ ಮಾಡಲಾಗುವುದು ಎಂದರು. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, 1 ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯ ಇರ ಬೇಕು. ಆದರೆ ದೇಶದಲ್ಲಿ 10-12 ಸಾವಿರ ಜನರಿಗೆ ಒಬ್ಬ ವೈದ್ಯ ಇದ್ದಾರೆ. ಜನಸಂಖ್ಯೆ ಗನುಗುಣವಾಗಿ ವೈದ್ಯರು ಇರ ಬೇಕೆಂದರೆ ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸ ಬೇಕು. ಪ್ರಧಾನಿ ಮೋದಿ ಯವರು ಕಳೆದ ಆರು ವರ್ಷ ಗಳಲ್ಲಿ 157 ಮೆಡಿಕಲ್ ಕಾಲೇಜು ಗಳಿಗೆ ಅನುಮತಿ ನೀಡಿದ್ದಾರೆ. 22 ಏಮ್ಸ್ ಸಂಸ್ಥೆಗಳನ್ನು ಸ್ಥಾಪಿಸುತ್ತಿದ್ದು, ಪ್ರತಿ ರಾಜ್ಯ ದಲ್ಲೂ ಏಮ್ಸ್ ಸಂಸ್ಥೆ ನಿರ್ಮಿಸುವ ಗುರಿ ಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದರು. ರಾಜ್ಯದಲ್ಲೂ ಏಮ್ಸ್ ಸಂಸ್ಥೆಯನ್ನು ತರ ಬೇಕು ಎಂಬ ಉದ್ದೇಶ ಇದೆ. ಏಮ್ಸ್ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ಅನು ಮತಿ ಪಡೆಯುವ ಪ್ರಕ್ರಿಯೆ ಜಾರಿಯಲ್ಲಿದ್ದು, ಶೀಘ್ರದಲ್ಲೇ ಏಮ್ಸ್ ಕೂಡ ರಾಜ್ಯಕ್ಕೆ ಸಿಗಲಿದೆ. ರಾಜ್ಯದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣವನ್ನು ಒಳಗೊಂಡ ಹೊಸ ನೀತಿ ತರ ಲಾಗುವುದು ಎಂದರು. ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ 150 ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ. ವೈದ್ಯಕೀಯ ಕಾಲೇಜು ಗಳು ಇಲ್ಲದ ಜಿಲ್ಲೆಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ಹಾಸಿಗೆ ಸಂಖ್ಯೆ ಹೆಚ್ಚಳ, ವೈದ್ಯಕೀಯ ಕಾಲೇಜು ಗಳಿಗೆ ಹಾಸ್ಟೆಲ್ ನಿರ್ಮಾಣ ಮೊದಲಾದ ಮೂಲಸೌಕರ್ಯ ಹೆಚ್ಚಿಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

Translate »