ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿರಿ
ಮಂಡ್ಯ

ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿರಿ

June 27, 2018

ಕೆ.ಆರ್.ಪೇಟೆ; ಸಮಾಜದಲ್ಲಿ ನಡೆಯುವ ಶೇ.80ರಷ್ಟು ಅಪರಾಧಗಳಿಗೆ ದುಶ್ಚಟಗಳೇ ಮೂಲ ಕಾರಣ. ಹಾಗಾಗಿ ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿರ ಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಸಂಸ್ಥೆ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಮನವಿ ಮಾಡಿದರು.

ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ತಾಲೂಕು ಕ್ರೀಡಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ, ಜಿಲ್ಲಾ ಜನಜಾಗೃತಿ ವೇದಿಕೆ ಹಾಗೂ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್‍ಎಸ್‍ಎಸ್ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾ ರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾ ಚರಣೆ ಅಂಗವಾಗಿ ನಡೆದ ದುಶ್ಚಟಗಳ ವಿರುದ್ಧ ಬೃಹತ್ ಜನಜಾಗೃತಿ ಜಾಥಾ, ಸ್ವಾಸ್ಥ್ಯ ಸಂಕಲ್ಪ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಮದ್ಯಪಾನ ನಿಷೇಧಿಸುವ ಮೂಲಕ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾ ಗಬೇಕು. ಕೇವಲ ಕಾಟಾಚಾರಕ್ಕೆ ಕಾರ್ಯ ಕ್ರಮಗಳನ್ನು ಅನುಷ್ಠಾನಗೊಳಿಸಿದರೇ ಜನಸಾಮಾನ್ಯರಿಗೆ ಯಾವುದೇ ಪ್ರಯೋ ಜನವಿಲ್ಲ ಎಂದ ಅವರು, ಶ್ರೀಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲೂ ಯೋಜನಾ ಕಚೇರಿಗಳನ್ನು ಸ್ಥಾಪಿಸಿ, ಪ್ರಗತಿ ಬಂಧು ಸ್ತ್ರೀಶಕ್ತಿ ಸ್ವಸಹಾಯ ಸಂಘಗಳನ್ನು ಸ್ಥಾಪಿಸಿ, ಸದಸ್ಯರು ಹಾಗೂ ಸಂಘದ ಪ್ರತಿನಿಧಿಗಳನ್ನು ಒಗ್ಗೂಡಿಸಿ ಮಹಿಳೆಯರಲ್ಲಿ ಸ್ವಯಂ ಉದ್ಯೋಗದ ಬಗ್ಗೆ ಜಾಗೃತಿ ಮೂಡಿಸುತ್ತಿದೆ ಎಂದರು.

ಪ್ರಸ್ತುತ ಯುವಜನರು ಮದ್ಯಪಾನ, ಮಾದಕ ವಸ್ತುಗಳ ಸೇವನೆ ಸೇರಿದಂತೆ ದುಶ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯ ವಾದ ಜೀವನವನ್ನೇ ಹಾಳು ಮಾಡಿಕೊಳ್ಳು ತ್ತಿದ್ದಾರೆ. ಆದ್ದರಿಂದ ಯುವಕರಿಗಾಗಿ ಸರ್ಕಾರ ಕೌಶಲ್ಯಾಧಾರಿತ ಕಾರ್ಯಕ್ರಮ ಗಳನ್ನು ಜಾರಿಗೆ ತರಬೇಕು. ಕಡ್ಡಾಯ ಸಮಾನ ಶಿಕ್ಷಣ ಪದ್ಧತಿ ಅನುಷ್ಠಾನಕ್ಕೆ ತಂದು ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಬೇಕು. ಜನಸಾಮಾನ್ಯರನ್ನು ಸೋಮಾರಿಗಳನ್ನಾಗಿ ಮಾಡುವ ಅನ್ನಭಾಗ್ಯ, ಕ್ಷೀರಭಾಗ್ಯದಂತಹ ಕಾರ್ಯಕ್ರಮಗಳನ್ನು ನಿಲ್ಲಿಸಿ ಮಹಿಳಾ ಸಬಲೀಕರಣ, ಸ್ವಉದ್ಯೋಗಕ್ಕೆ ನೆರವಾಗು ವಂತಹ ಸಮಾಜಮುಖಿ ಕಾರ್ಯಕ್ರಮ ಗಳನ್ನು ಜಾರಿಗೆ ತರಬೇಕು ಎಂದು ಶ್ರೀಹರಿ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶು ಪಾಲ ಕೆ.ಕಾಳೇಗೌಡ ರೈತ ಬಂಧುಗಳು ಹಾಗೂ ರೈತ ಮಹಿಳೆಯರಿಗೆ ಉಚಿತ ಸಸಿಗಳನ್ನು ವಿತರಿಸಿ ಮಾತನಾಡಿದರು.

ಬಿಇಓ ಬೆಟ್ಟನಾಯಕ್ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಡ್ಯ ಜಿಲ್ಲಾ ಜನಜಾಗೃತಿ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಸ್.ರಾಜೇಶ್ ಪ್ರಾಸ್ತಾ ವಿಕ ನುಡಿಗಳನ್ನಾಡಿದರು. ತಾಲೂಕು ಸಾಮಾಜಿಕ ವಲಯ ಅರಣ್ಯಾಧಿಕಾರಿ ಪ್ರಶಾಂತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಸಂಸ್ಥೆ ಜಿಲ್ಲಾ ಯೋಜನಾಧಿಕಾರಿ ವಿನಯಕುಮಾರ್ ಸುವರ್ಣ, ತಾಲೂಕು ಯೋಜನಾಧಿಕಾರಿ ಸುಧೀರ್ ಜೈನ್, ಕೃಷಿ ಅಧಿಕಾರಿ ನಿಂಗಪ್ಪ ಅಗಸರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಚಂದ್ರಶೇಖರ್, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ನಿರ್ದೇಶಕ ಕೆ.ಆರ್.ನೀಲಕಂಠ, ತಾಲೂಕು ಪ್ರೆಸ್‍ಕ್ಲಬ್ ಅಧ್ಯಕ್ಷ ಶ್ರೀನಿವಾಸ್.ಆರ್.ಸಜ್ಜನ್ ಮತ್ತಿತರರು ಕಾರ್ಯಕ್ರಮದಲ್ಲಿದ್ದರು.

ಕಾರ್ಯಕ್ರಮಕ್ಕೂ ಮುನ್ನ ವಿದ್ಯಾರ್ಥಿ ಗಳು ಹಾಗೂ ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳ ಪ್ರತಿನಿಧಿಗಳಿಂದ ದುಶ್ಚಟಗಳ ವಿರುದ್ಧ ಬೃಹತ್ ಜಾಗೃತಿ ಮೆರವಣಿಗೆ ನಡೆಯಿತು.

Translate »