ಎಲ್ಲೆಡೆ ಅನ್ನದಾತರ ಆರ್ಭಟ
News

ಎಲ್ಲೆಡೆ ಅನ್ನದಾತರ ಆರ್ಭಟ

September 28, 2021

ಬೆಂಗಳೂರು,ಸೆ.27-ಕೇಂದ್ರದ ನೂತನ ಕೃಷಿ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂಯುಕ್ತ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‍ಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೆಲ ಜಿಲ್ಲೆಗಳಲ್ಲಿ ಬಂದ್ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಮತ್ತೆ ಕೆಲವು ಜಿಲ್ಲೆಗಳಲ್ಲಿ ಭಾಗಶಃ ಪ್ರತಿಕ್ರಿಯೆ ವ್ಯಕ್ತ ವಾಗಿದೆ. ಕೆಲವು ಜಿಲ್ಲೆಗಳಲ್ಲಿ ರೈತ ಮುಖಂ ಡರನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಹೆದ್ದಾರಿ ತಡೆಗೆ ಮುಂದಾದ 20ಕ್ಕೂ ಹೆಚ್ಚು ರೈತರನ್ನು ಬಂಧಿ ಸಿದ್ದಾರೆ. ಜಿಲ್ಲಾದ್ಯಂತ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವ್ಯಾಪಾರ ವಹಿವಾಟು ಎಂದಿನಂತೆ ಸಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಸ್ ಸೇರಿ ದಂತೆ ವಾಹನಗಳ ಸಂಚಾರ ಎಂದಿನಂತೆ ಸಾಗಿದೆ. ಚಿತ್ರದುರ್ಗ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಸಾಮಾನ್ಯವಾಗಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆಗಳಲ್ಲಿ ವಾಣಿಜ್ಯ ವ್ಯವಹಾರ ಗಳು ಸಾಮಾನ್ಯವಾಗಿತ್ತು. ಸರ್ಕಾರಿ ಕಚೇರಿ ಗಳು, ಬ್ಯಾಂಕ್‍ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬಂದ್ ಯಾವುದೇ ಪರಿಣಾಮ ಬೀರಿಲ್ಲ. ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಬಸ್‍ಗಳ ಸಂಚಾರ ಎಂದಿನಂತೆ ಸಾಗಿದ್ದು, ಸಾರ್ವಜನಿಕರು ತಮ್ಮ ಚಟುವಟಿಕೆಯಲ್ಲಿ ತೊಡಗಿದ್ದರು. ಅಂಗಡಿ-ಮುಂಗಟ್ಟು, ಮಾರುಕಟ್ಟೆ, ಹೊಟೇಲ್ ಸೇರಿದಂತೆ ವ್ಯಾಪಾರ ವಹಿವಾಟು ಚಟುವಟಿಕೆ ಎಂದಿನಂತೆ ಸಾಗಿತ್ತು. ಬೆಂಗಳೂರು ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 4 ಸಾವಿರಕ್ಕೂ ಹೆಚ್ಚು ಪೆÇಲೀಸರನ್ನು ನಿಯೋಜನೆ ಮಾಡಲಾಗಿತ್ತು. ಬಲವಂತದ ಬಂದ್ ಮಾಡಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಬಸ್‍ಗೆ ಅಡ್ಡ ಮಲಗಿ ಆಕ್ರೋಶ: ಮೆಜೆಸ್ಟಿಕ್‍ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಸ್‍ಗೆ ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ಹೊರಹಾಕಿದರು. ಈ ವೇಳೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕನ್ನಡಪರ ಹೋರಾಟಗಾರ ಸಾರಾ ಗೋವಿಂದು ಸೇರಿ ಧರಣಿ ನಿರತರನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಾ ಗೋವಿಂದು, ರೈತರಿಗೆ ಮಾರಕವಾದ ಈ ಕಾಯ್ದೆಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು. ರಾಜ್ಯದ ಜನತೆ ನೈತಿಕ ಬೆಂಬಲವನ್ನು ಬಿಟ್ಟು ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರಿಗೆ ಬೆಂಬಲ ನೀಡುವಂತೆ ಅವರು ಮನವಿ ಮಾಡಿದರು.

Translate »