ನವದೆಹಲಿ: ರೂಪಾಂತರಿ ಕೊರೊನಾ ಸೋಂಕು ಪ್ರಕರಣ ಗಳು ಡಿ.30ರಂದು 20ಕ್ಕೆ ಏರಿಕೆಯಾಗಿದ್ದು, ಜನವರಿ 7ರವರೆಗೆ ಬ್ರಿಟನ್-ಭಾರತ ನಡು ವಿನ ವಿಮಾನಗಳಿಗೆ ನಿರ್ಬಂಧ ವಿಧಿಸ ಲಾಗಿದೆ. ಕೇಂದ್ರ ವಿಮಾನಯಾನ ಸಚಿವ ಹರ್ದೀಪ್ ಸಿಂಗ್‍ಪುರಿ ಈ ಬಗ್ಗೆ ಟ್ವೀಟ್ ಮಾಡಿ, “ಬ್ರಿಟನ್-ಭಾರತ ನಡುವಿನ ವಿಮಾನಗಳನ್ನು ನಿರ್ಬಂಧಿಸಲು ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ. ನಿರ್ಬಂಧ ತೆರವುಗೊಳಿಸುವ ಬಗ್ಗೆ ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಬ್ರಿಟನ್‍ನಿಂದ ಹರಡುತ್ತಿರುವ ರೂಪಾಂತರಿ ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಭಾರತ ಬ್ರಿಟನ್ ನಿಂದ ಬರುವ ಹಾಗೂ ಬ್ರಿಟನ್‍ಗೆ ತೆರಳುವ ವಿಮಾನಗಳಿಗೆ ಡಿ.31ವರೆಗೆ ನಿರ್ಬಂಧ ವಿಧಿಸಲಾಗಿತ್ತು. ಡಿ.29ರಂದು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ್ದ ಸಚಿವ ಹರ್ದೀಪ್ ಸಿಂಗ್ ನಿರ್ಬಂಧ ಮುಂದುವರೆಸುವ ಬಗ್ಗೆ ಸುಳಿವು ನೀಡಿದ್ದರು.