ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಮೈಸೂರು

ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

June 13, 2020

ಮೈಸೂರು, ಜೂ. 12 (ಆರ್‍ಕೆ)- ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜೂನ್ 22ಕ್ಕೆ ಕಡೇ ದಿನವಾಗಿದ್ದ ಸಿವಿಲ್ ಕಾನ್ ಸ್ಟೇಬಲ್ ಮತ್ತು ಸಿಎಆರ್, ಡಿಎಆರ್ ಕಾನ್‍ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 9ರವರೆಗೆ ವಿಸ್ತರಿಸಲಾಗಿದ್ದು, ಶುಲ್ಕ ಪಾವತಿಸಲು ಜುಲೈ 13 ಕಡೇ ದಿನವಾಗಿದೆ. ಜೂನ್ 22ಕ್ಕೆ ಕಡೇ ದಿನ ನಿಗಧಿಯಾಗಿದ್ದ ಮಹಿಳಾ ಮತ್ತು ಪುರುಷ ಸಿವಿಲ್ ಪೊಲೀಸ್ ಕಾನ್‍ಸ್ಟೇಬಲ್ ಹಾಗೂ ಆರ್ಮಡ್ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಜುಲೈ 13ಕ್ಕೆ ವಿಸ್ತರಿಸಲಾಗಿದ್ದು, ಶುಲ್ಕ ಪಾವತಿಸಲು ಜುಲೈ 15ರಂದು ಕಡೇ ದಿನವಾಗಿದೆ ಎಂದು ಎಸ್ಪಿ ತಿಳಿಸಿದರು.

ಜೂನ್ 15 ಕಡೇ ದಿನವಾಗಿದ್ದ ಕೆಎಸ್‍ಆರ್‍ಪಿ ಮತ್ತು ಬ್ಯಾಂಡ್ಸ್‍ಮನ್ ಕಾನ್‍ಸ್ಟೇಬಲ್ ಗಳ ಹುದ್ದೆಗೆ ಅರ್ಜಿ ಸಲ್ಲಿಸಲು ಜುಲೈ 6ರವರೆಗೆ ಹಾಗೂ ಶುಲ್ಕ ಪಾವತಿಸಲು ಜುಲೈ 8ರಂದು ಕಡೇ ದಿನವಾಗಿದೆ ಎಂದು ರಿಷ್ಯಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೈದ್ಯಕೀಯ ಪರೀಕ್ಷೆ: ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್‍ಸ್ಟೇಬಲ್ ಮತ್ತು ಸಶಸ್ತ್ರ ಮೀಸಲು ಪಡೆ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳಿಗೆ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿ ದಾಖಲೆಗಳ ಪರಿಶೀಲನೆಯಲ್ಲಿ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಜೂನ್ 15ರಿಂದ 19ರವರೆಗೆ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳಿಗೆ ಈಗಾಗಲೇ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗಿದೆ. ಅಂತಹ ಅಭ್ಯರ್ಥಿಗಳು ಪೊಲೀಸ್ ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.in ಮೂಲಕ ಕರೆ ಪತ್ರ (Call Letter)ಗಳನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿರುವ ದಿನಾಂಕಗಳಂದು ಸೂಚನೆಗಳ ಪ್ರಕಾರ ಮೆಡಿಕಲ್ ಟೆಸ್ಟ್‍ಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ತಿಳಿಸಿದ್ದಾರೆ.

Translate »