ಕೆ.ಆರ್.ನಗರದಲ್ಲಿ ಬಂದ್‍ಗೆ ವ್ಯಾಪಕ ಬೆಂಬಲ
ಮೈಸೂರು

ಕೆ.ಆರ್.ನಗರದಲ್ಲಿ ಬಂದ್‍ಗೆ ವ್ಯಾಪಕ ಬೆಂಬಲ

September 11, 2018

ಕೆ.ಆರ್.ನಗರ: ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಕಾಂಗ್ರೆಸ್ ಜತೆಗೆ ಜೆಡಿಎಸ್ ಮತ್ತು ಕಾಯಕ ಸಮಾಜ ಗಳ ಒಕ್ಕೂಟದ ಪದಾಧಿಕಾರಿಗಳು ಪ್ರತ್ಯೇಕ ವಾಗಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಭಾರತ್ ಬಂದ್ ಹಿನ್ನೆಲೆಯಲ್ಲಿ ಶಾಲಾ- ಕಾಲೇಜುಗಳಿಗೆ ರಜಾ ಘೋಷಿಸಲಾಗಿತ್ತು. ಸಾರಿಗೆ ಸಂಸ್ಥೆ ಬೆಳಿಗ್ಗೆ 7 ರಿಂದಲೇ ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ತಾಲೂಕು ಕೇಂದ್ರಕ್ಕೆ ಸಾರ್ವಜನಿಕರು ಆಗಮಿಸದೆ, ಪಟ್ಟಣ ಬಿಕೋ ಎನ್ನುತ್ತಿತ್ತು.
ಎಲ್ಲಾ ಅಂಗಡಿ ಮಾಲೀಕರು, ಹೋಟೆಲ್‍ಗಳನ್ನು ಬಂದ್ ಮಾಡಲಾಗಿತ್ತು. ಚಿತ್ರಮಂದಿರಗಳು ಪ್ರದರ್ಶನವನ್ನು ರದ್ಧು ಗೊಳಿಸುವ ಮೂಲಕ ಬಂದ್‍ಗೆ ಬೆಂಬಲ ಸೂಚಿಸಿದರು. ಅಟೋ ಮಾಲೀಕರು, ರಾಜಕೀಯ ಪಕ್ಷಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಇಂಧನ ಬೆಲೆ ಕಡಿಮೆ ಮಾಡುವಂತೆ ಒತ್ತಾಯಿಸಿದರು.

ಕೇಂದ್ರ ಸರ್ಕಾರ ಇಂಧನ ಬೆಲೆಯನ್ನು ದಿನದಿಂದ ದಿನಕ್ಕೆ ಏರಿಸುತ್ತಿರುವುದರಿಂದ ಅಗತ್ಯ ವಸ್ತುಗಳ ಬೆಲೆ ಗಗನಕೇರಿದ್ದು ಜನ ಸಾಮಾನ್ಯರು ಪರದಾಡುವಂತಹ ಸ್ಥಿತಿ ಎದುರಾಗಿದ್ದು, ಕೇಂದ್ರ ಸರ್ಕಾರ ತನ್ನ ಹಠ ಮಾರಿತನವನ್ನು ಬಿಟ್ಟು ಕೂಡಲೇ ಇಂಧನ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಜಿ.ಪಂ. ವಿಪಕ್ಷ ನಾಯಕ ಡಿ.ರವಿ ಶಂಕರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪಕ್ಷದ ಚುನಾಯಿತ ಜನಪ್ರತಿನಿಧಿ ಗಳು, ಮುಖಂಡರು ಮತ್ತು ಕಾರ್ಯಕರ್ತರು ಕೆಲ ಹೊತ್ತು ರಸ್ತೆ ತಡೆ ನಡೆಸಿ ವಾಣಿ ವಿಲಾಸ ರಸ್ತೆ ಮೂಲಕ ಮಿನಿ ವಿಧಾನ ಸೌಧಕ್ಕೆ ತೆರಳಿ ತಹಸೀಲ್ದಾರ್‍ಗೆ ಮನವಿ ಸಲ್ಲಿಸಿದರು.

ನಂತರ ಜೆಡಿಎಸ್ ತಾಲೂಕು ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಮೆರವಣಿಗೆ ತೆರಳಿ ಮನವಿ ಸಲ್ಲಿಸಿದರೆ, ಕಾಯಕ ಸಮಾಜ ಗಳ ಒಕ್ಕೂಟ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ ನೇತೃತ್ವದಲ್ಲಿ ಮೆರವಣಿಗೆಯಲ್ಲಿ ತೆರಳಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ವಿಪಕ್ಷ ನಾಯಕ ಡಿ.ರವಿಶಂಕರ್, ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದ ಶೆಟ್ಟಿ ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರಮೋದಿ ಹಿಟ್ಲರ್ ಸಂಸ್ಕøತಿಯನ್ನು ಬಿಟ್ಟು ಜನಸಾಮಾನ್ಯರಿಗೆ ಅನುಕೂಲವಾಗು ವಂತಹ ಕಾರ್ಯಕ್ರಮಗಳನ್ನು ಜಾರಿಗೊಳಿಸ ಬೇಕು ಎಂದು ಆಗ್ರಹಿಸಿದರಲ್ಲದೆ ಇಂದಿ ನಿಂದಲೇ ಇಂಧನ ಬೆಲೆ ಇಳಿಸಬೇಕು ಎಂದು ಒತ್ತಾಯಿಸಿದರು.

ಮೆರವಣಿಗೆಯುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಗಳನ್ನು ಕೂಗಿದ ಪ್ರತಿಭಟನಾಕಾರರು ಈ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಮತ್ತು ಮುಖಂಡರು ಮೌನ ತಾಳಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅವರ ವಿರುದ್ದವೂ ಕಿಡಿ ಕಾರಿದರು. ಜಿ.ಪಂ. ಸದಸ್ಯ ಅಚ್ಚುತಾನಂದ, ತಾ.ಪಂ. ಅಧ್ಯಕ್ಷ ಹೆಚ್.ಟಿ.ಮಂಜುನಾಥ್, ಮಾಜಿ ಅಧ್ಯಕ್ಷ ಹಾಡ್ಯಮಹದೇವಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಮಹದೇವ್, ಉದಯಶಂಕರ್, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಸುಬ್ರಹ್ಮಣ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಭೋಜರಾಜು, ಮಾಜಿ ಅಧ್ಯಕ್ಷ ನಟರಾಜು, ವಕ್ತಾರ ಸೈಯದ್ ಜಾಬೀರ್, ಪಿಎಲ್‍ಡಿ ಬ್ಯಾಂಕ್ ಮಾಜಿ ನಿರ್ದೇಶಕ ಜಿ.ಎಂ.ಹೇಮಂತ್, ಮುಖಂಡ ರಾದ ಶ್ರೀನಿವಾಸ್, ಚೀರ್ನಹಳ್ಳಿಶಿವಣ್ಣ, ಕೋಳಿ ಪ್ರಕಾಶ್, ಬಸವರಾಜು, ಕೆ.ಪಿ.ಜಗದೀಶ್, ವಿನಯ್, ಕೆ.ಎಸ್.ಮಹೇಶ್, ಪೆಟ್ರೋಲ್ ಮಂಜುನಾಥ್, ವೇಣುಗೋಪಾಲ್, ಪಟೇಲ್ ರಾಜು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನವನಗರ ಬ್ಯಾಂಕ್ ಅಧ್ಯಕ್ಷ ಕೆ.ಎನ್. ಬಸಂತ್, ಪುರಸಭಾಧ್ಯಕ್ಷೆ ಹರ್ಷಲತಾ ಶ್ರೀಕಾಂತ್, ಸದಸ್ಯರಾದ ಉಮೇಶ್, ಕೆ.ಎಲ್.ಜಗದೀಶ್, ಸರೋಜಮಹ ದೇವ್, ನಂಜುಂಡ, ತಾ.ಪಂ ಮಾಜಿ ಅಧ್ಯಕ್ಷ ತಂದ್ರೆರವಿ, ಮುಖಂಡ ರಾದ ಹೆಚ್.ಪಿ.ಹರೀಶ್, ಅರ್ಜುನಹಳ್ಳಿ ಗಣೇಶ್, ಸೈಯದ್‍ಅಸ್ಲಾಂ, ಹನಸೋಗೆನಾಗ ರಾಜು, ಕೆ.ಎಸ್.ದೀಪು, ಧರ್ಮರಾಜು, ರುದ್ರೇಶ್, ತಾಲೂಕು ಉಪಾಧ್ಯಕ್ಷ ವ್ಯಾನ್ ಸುರೇಶ್, ಯುವ ಜೆಡಿಎಸ್ ಅಧ್ಯಕ್ಷ ಮಧು ಚಂದ್ರ, ಉಪಾಧ್ಯಕ್ಷ ಕಾಂತರಾಜು, ಕಾರ್ಯಾಧ್ಯಕ್ಷ ಎಂ.ಎಸ್.ಕಿಶೋರ್ ಮತ್ತಿತರರು ಪಾಲ್ಗೊಂಡಿದ್ದರು.

ಕಾಯಕ ಸಮಾಜಗಳ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಬೋರಪ್ಪಶೆಟ್ಟಿ, ತಾಲೂಕು ಅಧ್ಯಕ್ಷ ತಿಮ್ಮಶೆಟ್ಟಿ, ಪದಾಧಿಕಾರಿ ಗಳಾದ ಮಹದೇವ್, ನಾಗರಾಜು, ಗೋಪಾಲ್‍ಗೌಡ ಗರುಡಗಂಭದಸ್ವಾಮಿ, ಕುಮಾರ್, ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.

Translate »