ಮಹಾರಾಣಿ ಪಿಯು ಕಾಲೇಜಿನ ಹೆಚ್ಚುವರಿ  ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ
ಮೈಸೂರು

ಮಹಾರಾಣಿ ಪಿಯು ಕಾಲೇಜಿನ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ

April 6, 2021

ಮೈಸೂರು,ಏ.5(ಪಿಎಂ)- ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯ ಮಹಾರಾಣಿ ಪದವಿಪೂರ್ವ ಕಾಲೇಜಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣದ 1 ಕೋಟಿ ರೂ. ವೆಚ್ಚದ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೋಮ ವಾರ ಚಾಲನೆ ನೀಡಿದರು.
ಚಾಮರಾಜ ಕ್ಷೇತ್ರದ ವ್ಯಾಪ್ತಿಯ ಮಹಾ ರಾಣಿ ಪದವಿಪೂರ್ವ ಕಾಲೇಜಿನ ಆವರಣ ದಲ್ಲಿ ಜಿಲ್ಲಾ ಪಂಚಾಯತ್ ಇಂಜಿನಿಯ ರಿಂಗ್ ವಿಭಾಗದ ಅನುದಾನದಲ್ಲಿ ಕೈಗೆತ್ತಿ ಕೊಂಡಿರುವ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ ಅವರ ಉಪಸ್ಥಿತಿಯಲ್ಲಿ ಸಚಿ ವರು ಭೂಮಿ ಪೂಜೆ ನೆರವೇರಿಸಿದರು.

ಕಾಲೇಜಿನ ಆವರಣದಲ್ಲಿ 4 ಕೊಠಡಿಗಳು (ನೆಲಮಹಡಿಯಲ್ಲಿ), ಮೊದಲನೇ ಮಹಡಿ ಯಲ್ಲಿ 3 ಕೊಠಡಿಗಳು ಸೇರಿದಂತೆ 2 ಶೌಚಾ ಲಯ ನಿರ್ಮಾಣ ಕಾಮಗಾರಿ ನಡೆಸಲಾಗು ತ್ತಿದೆ. ಕಾಮಗಾರಿಗೆ ಚಾಲನೆ ನೀಡಿದ ಸಚಿವರು ಇದೇ ವೇಳೆ ಕಾಲೇಜಿನ ವಿದ್ಯಾರ್ಥಿನಿಯ ರನ್ನು ಭೇಟಿ ಮಾಡಿ, ಕೋವಿಡ್-19 ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.

ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದ ಸಚಿವರು, ಕಡ್ಡಾಯವಾಗಿ ಕೋವಿಡ್-19 ಲಸಿಕೆ ಪಡೆಯುವಂತೆ ನಿಮ್ಮ ಪೆÇೀಷಕರಿಗೆ ಮನವರಿಕೆ ಮಾಡಿಕೊಡಿ ಎಂದು ಸಲಹೆ ನೀಡಿದರು. ಅಲ್ಲದೆ, ಕೊರೊನಾ ಸೋಂಕು ಮತ್ತೆ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದ ರಿಂದ ಮಾಸ್ಕ್ ಧರಿಸುವುದು ಹಾಗೂ ದೈಹಿಕ ಅಂತರ ಕಾಪಾಡುವುದನ್ನು ಪಾಲಿಸುವ ಜೊತೆಗೆ ಈ ಬಗ್ಗೆಯೂ ನಿಮ್ಮ ಪೋಷಕ ರಿಗೂ ತಿಳಿಸಬೇಕೆಂದು ತಿಳಿ ಹೇಳಿದರು.
ಜೊತೆಗೆ ಕೋವಿಡ್ ಹಿನ್ನೆಲೆಯಲ್ಲಿ ಆಗಾಗ್ಗೆ ಸರ್ಕಾರ ಹೊರಡಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ವಿದ್ಯಾರ್ಥಿ ನಿಯರಿಗೆ ತಿಳಿಸಿದರು. ಮುಡಾ ಅಧ್ಯಕ್ಷ ಹೆಚ್.ವಿ. ರಾಜೀವ್, ಪಾಲಿಕೆ ಸದಸ್ಯೆ ಪ್ರಮೀಳಾ ಭರತ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Translate »