ಪ್ರತೀ ಶುಕ್ರವಾರ ಚಾ.ಬೆಟ್ಟಕ್ಕೆ ಹೆಚ್ಚುವರಿ ಭದ್ರತೆ
ಮೈಸೂರು

ಪ್ರತೀ ಶುಕ್ರವಾರ ಚಾ.ಬೆಟ್ಟಕ್ಕೆ ಹೆಚ್ಚುವರಿ ಭದ್ರತೆ

March 3, 2021

ಮೈಸೂರು,ಮಾ.2(ಆರ್‍ಕೆ)-ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿ ದ್ದಂತೆಯೇ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿರುವುದ ರಿಂದ ಪ್ರತೀ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗುವುದು ಎಂದು ಡಿಸಿಪಿ ಡಾ.ಎ.ಎನ್.ಪ್ರಕಾಶ್‍ಗೌಡ ತಿಳಿಸಿದ್ದಾರೆ.

ಈ ಕುರಿತು ಕೆ.ಆರ್.ಉಪ ವಿಭಾಗದ ಎಲ್ಲಾ ಪೊಲೀಸ್ ಠಾಣೆಗಳಿಗೆ ಪತ್ರ ಬರೆದಿರುವ ಅವರು, ಶುಕ್ರವಾರಗಳಂದು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಚಾಮುಂಡಿಬೆಟ್ಟದಲ್ಲಿ ನೂಕು-ನುಗ್ಗಲು ಉಂಟಾ ಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಸರದಿ ಆಧಾರದಲ್ಲಿ ಠಾಣೆಯ ಇನ್ಸ್‍ಪೆಕ್ಟರ್, ಸಬ್ ಇನ್ಸ್‍ಪೆಕ್ಟರ್ ಹಾಗೂ 10 ಮಂದಿ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸುವಂತೆ ಅವರು ಜ್ಞಾಪನ ಪತ್ರದಲ್ಲಿ ತಿಳಿಸಿದ್ದಾರೆ.

Translate »