ದಸರಾ ಕಾರ್ಯಕ್ರಮಗಳಲ್ಲಿ ತೀವ್ರ ಕಟ್ಟೆಚ್ಚರ
ಮೈಸೂರು

ದಸರಾ ಕಾರ್ಯಕ್ರಮಗಳಲ್ಲಿ ತೀವ್ರ ಕಟ್ಟೆಚ್ಚರ

October 15, 2020

ಬೆಂಗಳೂರು,ಅ.14(ಕೆಎಂಶಿ)-ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಭಾಗ ವಹಿಸುವ ಪ್ರತಿಯೊಬ್ಬರು ಕೋವಿಡ್ -19 ತಪಾಸಣೆಗೊಳಪಟ್ಟು, ಸೋಂಕು ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ ಪಡೆ ಯುವುದನ್ನು ಕಡ್ಡಾಯಗೊಳಿಸಿ, ರಾಜ್ಯದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಇಂದಿಲ್ಲಿ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಗೃಹ ಇಲಾಖೆ ಆದೇಶದಂತೆ ಆಚರಣೆಯಲ್ಲಿ ಭಾಗವಹಿಸುವ ಕರ್ತವ್ಯ ನಿರತ ಅಧಿಕಾರಿಗಳು, ಸಿಬ್ಬಂದಿ, ಕಲಾವಿದರು, ರಕ್ಷಣಾ ಸಿಬ್ಬಂದಿ ಹಾಗೂ ಮಾಧ್ಯಮದವರು ಒಳಗೊಂಡಂತೆ ಅ.14ರ ನಂತರ ತಪಾಸಣೆಗೊಳಪಟ್ಟು, ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು. ಸರ್ಕಾರ ಹೊರಡಿಸಿರುವ ಆದೇಶಗಳನ್ನು ಪಾಲನೆ ಮಾಡದವರಿಗೆ ಸಮಾರಂಭದ ಯಾವುದೇ ಸಭೆಗಳಿಗೂ ಮತ್ತು ಕಾರ್ಯ ಕ್ರಮಗಳಿಗೂ ಅವಕಾಶ ನೀಡಬಾರದು. ಈ ಬಗ್ಗೆ ಜಿಲ್ಲಾ ಡಳಿತ ಎಚ್ಚರಿಕೆ ವಹಿಸಬೇಕೆಂದು ಸೂಚಿಸಿದೆ.

ಮುಖಗವಸು (ಮಾಸ್ಕ್) ಧರಿಸದೇ ಇರುವ ಸಾರ್ವಜನಿ ಕರ ವಿರುದ್ಧ ನಿಯಮಾನುಸಾರ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಹೊರಡಿಸುವ ಷರತ್ತು ಗಳಲ್ಲದೆ, ಜಿಲ್ಲಾಡಳಿತವು ಸುರಕ್ಷಿತ ರೀತಿಯಲ್ಲಿ ದಸರಾ ಹಬ್ಬ ಆಚರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ನಿರ್ದೇಶನ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿ ಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 180 ರಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಜರುಗಿಸಲಾಗು ವುದು ಎಂದು ಎಚ್ಚರಿಸಿದ್ದಾರೆ. ಅರಮನೆ ಆವರಣದಲ್ಲಿ ನಡೆಸಲಾಗುವ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮತ್ತು ಸ್ಯಾನಿಟೈಸರ್‍ಗಳನ್ನು ಕಡ್ಡಾಯವಾಗಿ ಬಳಸುವ ಷರತ್ತು ವಿಧಿಸಿದೆ. ಕೋವಿಡ್-19 ಸಾಂಕ್ರಾಮಿಕ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ದಸರಾ ಹಬ್ಬ ಆಚರಣೆಯನ್ನು ಮೈಸೂರಿನಲ್ಲಿ ದೃಶ್ಯ ಸಂವಹನದ ಮೂಲಕ ಸಾರ್ವಜನಿಕರು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸಮಾರಂಭಗಳಿಗೆ ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆಚರಣೆ ವೇಳೆ ಅಂದರೆ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆ ಸಂದರ್ಭದಲ್ಲಿ 200 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಅರಮನೆ ಆವರಣದಲ್ಲಿ ಅ.17ರಿಂದ 24ರವರೆಗೂ ನಡೆಯುವ ಕಾರ್ಯಕ್ರಮಗಳಿಗೆ 50 ಜನರಿಗೆ ಮೀರದಂತೆ ಕಾರ್ಯಕ್ರಮ ನಡೆಸಬೇಕು. ಈ 8 ದಿನಗಳವರೆಗೆ ಸ್ಥಳೀಯ ಕಲಾವಿದರಿಂದ ಪ್ರತಿದಿನ ಎರಡು ಗಂಟೆಗಳು ಗರಿಷ್ಟ ಕಾರ್ಯ ಕ್ರಮ ನಡೆಸುವುದು. ಮೈಸೂರು ನಗರದಲ್ಲಿ ಅಕ್ಟೋಬರ್ 17ರಿಂದ 26ರವರೆಗೂ ಆಯ್ದ ಸ್ಥಳಗಳಲ್ಲಿ ಸಂಜೆ 7ರಿಂದ 9 ಗಂಟೆಯವರೆಗೆ ಬೆಳಕಿನ ವ್ಯವಸ್ಥೆ ಕಲ್ಪಿಸುವುದು. ಕೋವಿಡ್ ಸಿಬ್ಬಂದಿ ಆಯಾಕಟ್ಟಿನ ಸ್ಥಳಗಳಲ್ಲಿ ಜನದಟ್ಟಣೆಯಾಗುವುದನ್ನು ತಡೆಯಬೇಕು. ಮತ್ತು ಎಲ್ಲರೂ ಕಡ್ಡಾಯವಾಗಿ ಮುಖಗವಸು ಧರಿಸಬೇಕು ಎಂದು ಸೂಚಿಸಿದ್ದಾರೆ. ದಸರಾ ಆಚರಣೆ ವೇಳೆ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಮತ್ತು ಸಾಮರಸ್ಯಗಳನ್ನು ಕಾಪಾಡಿಕೊಳ್ಳಲು ಸ್ಥಳೀಯ ಆಡಳಿತ ಕ್ರಮ ಕೈಗೊಳ್ಳಬೇಕು. ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಬರದಂತೆ ಕಾಪಾಡುವುದು ಜಿಲ್ಲಾಡಳಿತದ ಹೊಣೆಗಾರಿಕೆ ಎಂದು ತಿಳಿಸಿದ್ದಾರೆ.

 

ಸಾರ್ವಜನಿಕರಿಗೆ ಪ್ರವೇಶ ನಿಷಿದ್ಧ
ಮೈಸೂರು, ಅ. 14- ದಸರಾ ಆಚರಣೆ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ. ಮೈಸೂರಿನಲ್ಲಿ ಆಚರಿಸಲಾಗುವ ದಸರಾ ಕಾರ್ಯಕ್ರಮಗಳನ್ನು ದೃಶ್ಯ ಸಂವಹನ (ಗಿIಖಖಿUಂಐ) ಮೂಲಕ ಸಾರ್ವಜನಿಕರು ವೀಕ್ಷಿಸಲು ಅವಕಾಶ ಕಲ್ಪಿಸಿದ್ದು, ಈ ಸಮಾರಂಭಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಚಾಮುಂಡಿಬೆಟ್ಟದಲ್ಲಿ ಅ. 17ರಂದು ಬೆಳಗ್ಗೆ ಮುಖ್ಯ ಮಂತ್ರಿಗಳು ಮತ್ತು ಇತರ ಗಣ್ಯರಿಂದ ನಡೆಯಲಿರುವ ದಸರಾ ಉದ್ಘಾಟನೆ ಸಮಾರಂಭದಲ್ಲಿ ಕರ್ತವ್ಯ ನಿರತ ಅಧಿಕಾರಿಗಳು, ಸಿಬ್ಬಂದಿ, ಕಲಾವಿದರು, ಮಾಧ್ಯಮ ಪ್ರತಿನಿಧಿ ಗಳು ಒಳಗೊಂಡಂತೆ 200 ಜನರಿಗೆ ಮಾತ್ರ ಅವಕಾಶ ಕಲ್ಪಿಸಬೇಕು ಹಾಗೂ ಕೋವಿಡ್-19ಕ್ಕೆ ಸಂಬಂಧಪಟ್ಟ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾರ್ಗ ಸೂಚಿಯಲ್ಲಿ ತಿಳಿಸಲಾಗಿದೆ. ಅರಮನೆ ಆವರಣದಲ್ಲಿ ಅ.17ರಿಂದ 24ರವರೆಗೆ ಸ್ಥಳೀಯ ಕಲಾವಿದರಿಂದ ಪ್ರತಿ ದಿನ 2 ಗಂಟೆ ಕಾಲ ಗರಿಷ್ಠ 50 ಜನರಿಗೆ ಮೀರದಂತೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸತಕ್ಕದ್ದು. ಮೈಸೂರು ನಗರದಲ್ಲಿ ಅ.17ರಿಂದ 26ರವರೆಗೆ ಸಂಜೆ 7ರಿಂದ ರಾತ್ರಿ 9 ಗಂಟೆವರೆಗೆ ಆಯ್ದ ಸ್ಥಳಗಳಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡುವುದು, ಆಯಾ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಯು ಜನದಟ್ಟಣೆಯಾಗುವುದನ್ನು ತಡೆಗಟ್ಟುವುದು ಹಾಗೂ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ಪರಿಶೀಲಿಸ ಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಅರಮನೆ ಆವರಣದಲ್ಲಿ ಅ.26ರಂದು ನಡೆಯಲಿರುವ ಜಂಬೂಸವಾರಿಯಲ್ಲಿ ಕೋವಿಡ್-19ಕ್ಕೆ ಸಂಬಂಧಪಟ್ಟ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕರ್ತವ್ಯ ನಿರತ ಅಧಿಕಾರಿಗಳು, ಸಿಬ್ಬಂದಿ, ಕಲಾವಿದರು, ಮಾಧ್ಯಮದವರನ್ನೊಳ ಗೊಂಡಂತೆ 300 ಜನರಿಗೆ ಮಾತ್ರ ಅವಕಾಶ ಕಲ್ಪಿಸುವುದು. ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಅ.14ರ ನಂತರ ಕೋವಿಡ್-19 ಆರ್‍ಟಿಪಿಸಿಆರ್ ತಪಾಸಣೆ ನಡೆಸಿ ಸೋಂಕು ಇಲ್ಲದಿರುವ ಬಗ್ಗೆ ಕಡ್ಡಾಯವಾಗಿ ಪ್ರಮಾಣಪತ್ರ ಪಡೆದಿರಬೇಕು.

ಮೈಸೂರು ಮತ್ತು ರಾಜ್ಯದ ಇತರ ಜಿಲ್ಲೆಗಳಿಂದ ಬರುವ ಕಲಾವಿದರು ಮತ್ತು ಸಾಂಸ್ಕøತಿಕ ಕಾರ್ಯಕ್ರಮದ ವೃಂದದವರಿಗೆ ಮಾತ್ರ ಆದ್ಯತೆ ನೀಡಬೇಕು. ಮಾಸ್ಕ್ ಧರಿಸದಿರುವ ಸಾರ್ವಜನಿಕರಿಗೆ ನಿಯಮಾನುಸಾರ ದಂಡ ವಿಧಿಸಲು ಕ್ರಮ ಕೈಗೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಮೈಸೂರು ಹೊರತುಪಡಿಸಿ ರಾಜ್ಯದ ಇತರೆಡೆ ನಡೆಸಲಾಗುವ ದಸರಾ ಕಾರ್ಯಕ್ರಮಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

 

 

 

Translate »