ನಕಲಿ ಗುರುತಿನ ಚೀಟಿ ವಂಚನೆ: ವ್ಯಕ್ತಿ ಬಂಧನ
ಹಾಸನ

ನಕಲಿ ಗುರುತಿನ ಚೀಟಿ ವಂಚನೆ: ವ್ಯಕ್ತಿ ಬಂಧನ

August 7, 2018

ಹಾಸನ: ವಿಕಲಚೇತನರು ಮತ್ತು ವೃದ್ಧಾಪ್ಯ ವೇತನಕ್ಕೆ ಗುರುತಿನ ಚೀಟಿ ಕೊಡಿಸುವುದಾಗಿ ಹಣ ವಸೂಲಿ ಮಾಡಿ ವಂಚಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ವ್ಯಕಿಯೋರ್ವನನ್ನು ಬಡಾವಣೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೋಹನ್ ಕುಮಾರ್ ಎಂಬಾತ ಬಂಧಿತ ಆರೋಪಿ.

ನಗರದ ಹೇಮಾವತಿ ಪ್ರತಿಮೆ ಬಳಿ ನಕಲಿ ಸರ್ಟಿಫಿಕೇಟ್‍ಗಳನ್ನು ಮಾರಾಟ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಡಾವಣೆ ಪೊಲೀಸರು, ದಾಖಲೆ ಸಮೇತ ಬಂಧಿಸಿದ್ದಾರೆ. ಈತ ಹಲವು ದಿನಗಳಿಂದ ಈ ದಂಧೆಯಲ್ಲಿ ಪಾಲ್ಗೊಂಡಿದ್ದ ಎಂದು ತಿಳಿದು ಬಂದಿದ್ದು, ಪೊಲೀಸರು ಈತನನ್ನು ಹಿಡಿ ಯಲು ಹಲವು ಬಾರಿ ಪ್ರಯತ್ನಿಸಿದರೂ ಸಾಧ್ಯ ವಾಗಿರಲಿಲ್ಲ.

ಆದರೆ ಇಂದು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರದಿಂದ ನೀಡುವ ವೃದ್ಧಾಪ್ಯ ವೇತನ, ಅಂಗವಿಕಲರ ವೇತನಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರ ಹಾಗೂ ಅಮಾಯಕರನ್ನು ವಂಚಿಸುತ್ತಿದ್ದ ಈತ, ಈ ಯೋಜನೆಗೆ ಬೇಕಾಗಿರುವ ಎಲ್ಲಾ ದಾಖಲಾತಿಗಳನ್ನು ನಕಲು ಮಾಡಿ ಹಣಕ್ಕೆ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಮೋಹನ್ ಕುಮಾರ್ ಹಲವು ಅಧಿಕಾರಿಗಳ ಸಹಿಯನ್ನು ನಕಲು ಮಾಡಿ ಕೊಂಡು ಸರ್ಟಿಫಿಕೇಟ್ ತಯಾರಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಂಗವಿಕಲರ ಇಲಾಖೆ, ಹಿರಿಯ ನಾಗರಿಕ ಕಲ್ಯಾಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ನಿರ್ದೇಶನದ ಮೇರೆಗೆ ಬಡಾವಣೆ ಠಾಣೆ ಪೊಲೀಸರು ಬಂಧಿಸಿ ದ್ದು, ತನಿಖೆ ಮುಂದುವರೆಸಿದ್ದಾರೆ.

Translate »